ದಾವಣಗೆರೆ| ಸ್ಟೆನೋಗ್ರಾಫರ್ ಗ್ರೇಡ್-ಸಿ – ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ. ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಇಂಗ್ಲೀಷ್, ಹಿಂದಿ ಶೀಘ್ರಲಿಪಿ ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬೆಸೈಟ್ https://ssc.gov.in ಅಥವಾ http://www.ssckkr.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ರಾಜ್ಯದ ಎಲ್ಲಾ ಕೋರ್ಟ್ ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆ

ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರೇಡ್-ಸಿ ಹುದ್ದೆಗೆ 18 ರಿಂದ 30 ವರ್ಷ, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು. ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ :080-2527342/25502520 ಅಥವಾ 080-25520653 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ನೋಡಿ: ಹಲ್ಮಿಡಿ ಶಾಸನದಿಂದ ಬೂಕರ್‌ವರೆಗೆ ಹಾಸನದ ಕೊಡುಗೆ: ಬರಗೂರುJanashakthi Media

Donate Janashakthi Media

Leave a Reply

Your email address will not be published. Required fields are marked *