ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ 34 ವಿಷಯಗಳಿಗೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ತಿಳಿಸಿದರು.
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ರೂ.4ರಂತೆ ಹೆಚ್ಚಿಸಲು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇನ್ನು ಪರಿಶಿಷ್ಟ ಸಮುದಾಯದಲ್ಲಿ ಒಳ ಮೀಸಲಾತಿ ಜಾರಿ ಸಂಬಂಧದ ರಚಿಸಲಾದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯು ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಿದೆ ಎಂದರು.
ಇದನ್ನೂ ಓದಿ: ಸರ್ಕಾರಿ ಕಛೇರಿಗಳಿಲ್ಲಿ ಲೋಪ; 13 ಮಂದಿ ಅಧಿಕಾರಿಗಳ ವಿರುದ್ದ ದೂರು ದಾಖಲು
ನಾಗಮೋಹನ್ ದಾಸ್ ಅವರ ಸಮಿತಿಯು ನಾಲ್ಕು ಪ್ರಮುಖ ಶಿಫಾರಸು ಮಾಡಿದೆ. 30-40 ದಿನಗಳೊಳಗೆ ಹೊಸ ಸಮೀಕ್ಷೆ ನಡೆಸಬೇಕು. ನಾಗಮೋಹನ್ ದಾಸ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ ಎಂದರು.
ಒಳ ಮೀಸಲಾತಿ ವರ್ಗೀಕರ ವಿಚಾರದಲ್ಲಿ ಮಧ್ಯಂತರ ವರದಿಯ ಸಮೀಕ್ಷೆ ಕುರಿತಾಗಿ ಎರಡು ತಿಂಗಳ ಸಮಯವನ್ನು ಸಚಿವ ಸಂಪುಟ ಸಭೆ ನಿಗದಿಪಡಿಸಿದೆ ಎಂದು ಹೇಳಿದರು. ಇನ್ನು ನಂದಿನ ಹಾಲಿನ ದರ ಏರಿಕೆಗೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ಇದನ್ನೂ ನೋಡಿ: ತುಮಕೂರು | ರೈತರ ಮೇಲೆ ಗುಬ್ಬಿ ಶಾಸಕನ ದರ್ಪ – KPRS ಖಂಡನೆ Janashakthi Media