ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯಾದ್ಯಂತ ಏಪ್ರಿಲ್ 2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ

ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ, ತುಮ ಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ : ಮಧ್ಯಪ್ರದೇಶ| ಗರ್ಭಿಣಿ ಮಹಿಳೆಯ ಚಿಕಿತ್ಸೆ ನಿರಾಕರಣೆ; ನವಜಾತ ಶಿಶು ಸಾವು

ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್‌ಎಎಲ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶದಾಖಲಾಗಿದೆ.

ಇದನ್ನೂ ನೋಡಿ : ಇಂಗ್ಲೀಷ್‌ ಕಲಿಯೋಣ | ಸರ್ವನಾಮಗಳು – Pronouns | ತೇಜಸ್ವಿನಿ Janashakthi Media

Donate Janashakthi Media

Leave a Reply

Your email address will not be published. Required fields are marked *