ಅರವಿಂದ ಲಿಂಬಾವಳಿ ಸೇರಿ ಎಲ್ಲರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತು ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಆತ್ಮಹತ್ಯೆಕೆ ಶರಣಾದ ಪ್ರದೀಪ್ ಮನೆಗೆ ಭೇಟಿದ ಅವರು, ಪ್ರದೀಪ್ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾಗಿರುವವರನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು. ಆದರೆ ಈವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ಸು ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಸ್ ಕೊಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಇದನ್ನು ಓದಿ: ಉದ್ಯಮಿ ಪ್ರದೀಪ್ ಆತ್ಮಹತ್ಯೆ: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

ಆತ್ಮಹತ್ಯೆ ಪತ್ರದಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತವೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ್ದು, ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಕೆಲವರು ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ. ಬಿಜೆಪಿಯವರು ನಾಯಕರ ಹಣದಾಸೆಗೆ ಇಂಥಾ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದರು.

Donate Janashakthi Media

Leave a Reply

Your email address will not be published. Required fields are marked *