ಉದ್ಯೋಗ ಸಿಗದೆ ಆತ್ಮಹತ್ಯೆಗೆ ಶರಣಾದ ಸಹನಾ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ 23 ವರ್ಷದ ಎಂಬಿಎ ಪಧವೀಧರೆ ಸಹನಾ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆಯೇ ಪದವಿ ಮುಗಿಸಿದ್ದರು. ತನ್ನ ವಿದ್ಯಾರ್ಹತೆಗೆ ಸೂಕ್ತ ಕೆಲಸ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.

ಏಪ್ರಿಲ್ 30ರಂದು ಶಿರ್ವ ಸಮೀಪದ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ತನ್ನ ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದ ಸಹನಾ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾರನೆ ದಿನ ವಿಪರೀತ ವಾಂತಿಯಿಂದ ಆಕೆಯನ್ನು ಉಡುಪಿಯ ಮಿಷನ್ ಆಸ್ಪತ್ರೆಗೆ ಸೇರಿಸಿದ್ದರು. ಸ್ಥಿತಿ ತೀರ ಹದಗೆಟ್ಟಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೇ 7ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಹನಾ ಅವರನ್ನು ಸ್ಥಳಾಂತರಿಸಲಾಯಿತು. ಮೇ 9ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆಯೂ ನಡೆದಿದೆ. ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರಾಜ್ಯ, ಕೇಂದ್ರ ಸರಕಾರ ಯುವಕರಿಗೆ ಉದ್ಯೋಗ ಸೃಷ್ಟಿಸದಿರುವ ವಿರುದ್ಧ ಹೋರಾಟ ನಡೆಯಲಿದೆ ಎಂದು ಯುವ ಕಾಂಗ್ರೆಸ್‌ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *