ಭದ್ರತಾ ಸಿಬ್ಬಂದಿ; ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಎಬಿವಿಪಿ ಗೂಂಡಾಗಳನ್ನು ಬಂಧಿಸಿ: ಎಸ್‌ಎಫ್‌ಐ

ಬೆಂಗಳೂರು: ನಗರದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸುವಂತೆ ಹಾಗೂ ಸೂಕ್ತ ತನಿಖೆ ನಡೆಸುವಂತೆ ಎಸ್‌ಎಫ್‌ಐ ಒತ್ತಾಯಿಸಿದೆ.

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ 20 ಜನರ ಎಬಿವಿಪಿ ಗುಂಡಾ ಗುಂಪು ಕ್ಯಾಂಪಸ್‌ಗೆ ಅಕ್ರಮವಾಗಿ ಪ್ರವೇಶ ಮಾಡಿ ವಿಶ್ವ ವಿದ್ಯಾಲಯದ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸುತ್ತದೆ ಹಾಗೂ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಎಸ್ ಎಫ್ ಐ ನಿಲ್ಲುತ್ತದೆ.

ಮಂಗಳವಾರ ಸಂಜೆ ಕಾಶ್ಮೀರದ ಬಗ್ಗೆ ಅನೌಪಚಾರಿಕ ಚರ್ಚೆ ಮಾಡಲು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಆದರೆ ಇದರ ಕುರಿತು ವಿಶ್ವ ವಿದ್ಯಾಲಯದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ 20 ಕ್ಕೂ ಹೆಚ್ಚು ಎಬಿವಿಪಿ ಗೂಂಡಾಗಳು ವಿಶ್ವ ವಿದ್ಯಾಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ವಿಶ್ವವಿದ್ಯಾಲಯದ ಆಸ್ತಿಗಳನ್ನು ಧ್ವಂಸ ಮಾಡಿ, ಭದ್ರತಾ ಸಿಬ್ಬಂದಿಗಳ ಮೇಲೆ ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಕ್ಯಾಂಪಸ್ ನಲ್ಲಿ ಎಬಿವಿಪಿ ದಾಂಧಲೆ : ದೂರು ದಾಖಲು

ನಮ್ಮ ಕ್ಯಾಂಪಸ್‌ನಲ್ಲಿ ಹೊರಗಿನ ಜನರ ಗುಂಪೊಂದು ನಡೆಸಿದ ಗದ್ದಲ ಮತ್ತು ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ವಿಶ್ವವಿದ್ಯಾಲಯ ಹೇಳಿಕೆ ಬಿಡುಗಡೆ ಮಾಡಿದೆ ಹಾಗೂ ಈ ವಿಶ್ವವಿದ್ಯಾಲಯದಲ್ಲಿ ಯಾವುದೇ ಕಾರ್ಯಕ್ರಮವು ನಡೆಯಲೇ ಇಲ್ಲ ಸ್ಪಷ್ಟಪಡಿಸಿದೆ.

ಈಗಾಗಲೇ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸಗೊಳಿಸಿ, ಕ್ಯಾಂಪಸ್‌ಗೆ ನುಗ್ಗಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗೆ ಸೇರಿದ ವಿದ್ಯಾರ್ಥಿಗಳ ಗುಂಪನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿದ್ಯಮಾನಗಳು, ಪ್ರಸ್ತುತ ಆರ್ಥಿಕ, ಸಾಮಾಜಿಕ, ರಾಜಕೀಯ ಚರ್ಚೆ ನಡೆಸುವುದು ಸಾಮಾನ್ಯ. ಇದು ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮಟ್ಟ ಹೆಚ್ಚಿಸುವುದಕ್ಕೆ ಸಹಾಯವಾಗುತ್ತದೆ. ಇದು ವಿಶ್ವವಿದ್ಯಾಲಯದ ಪ್ರಜಾಪ್ರಭುತ್ವವಾಗಿದೆ. ವಿಶ್ವ ವಿದ್ಯಾಲಯಗಳಲ್ಲಿ ಕ್ಯಾಂಪಸ್ ಡೆಮಾಕ್ರಸಿ ಇರಬೇಕೆಂದು ಎ ಎಫ್ ಐ ಒತ್ತಾಯಿಸುತ್ತದೆ.

ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿಶ್ವ ವಿದ್ಯಾಲಯಗಳಲ್ಲಿ ಕೋಮುವಾದವನ್ನು ಉಂಟು ಮಾಡುತ್ತಿದೆ. ಕಾಲೇಜು ಕ್ಯಾಂಪಸ್ ಗಳಲ್ಲಿ, ವಿಶ್ವ ವಿದ್ಯಾಲಯಗಳಲ್ಲಿ ಎಬಿವಿಪಿ ಹಿಂಸೆ, ಪ್ರಚೋದನೆ ಹಾಗೂ ಉದ್ದೇಶ ಪೂರ್ವಕವಾಗಿ ಗಲಭೆಗಳನ್ನು ಸೃಷ್ಟಿಸಿ ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ನಡುವೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದೆ.

JNU ಸೇರಿದಂತೆ ದೇಶದ ಹಲವು ವಿಶ್ವ ವಿದ್ಯಾಲಯಗಳಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ನಾವು ಗಮನಿಸಬಹುದು. ಅದೇ ರೀತಿಯಲ್ಲಿ ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಉದ್ದೇಶ ಪೂರ್ವಕವಾಗಿ ವಿದ್ಯಾರ್ಥಿಗಳಿಗೆ ಹಲ್ಲೆ ಹಾಗೂ ಗಲಭೆಗಳನ್ನು ಸೃಷ್ಟಿ ಮಾಡಲು ಮುಂದಾಗಿದೆ.

ಆದರಿಂದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳ ಮೇಲೆ ಪ್ರಕರಣ ದಾಖಲು ಮಾಡಬೇಕು ಹಾಗೂ ತಕ್ಷಣ ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗುಂಡಾಗಳನ್ನು ಬಂಧಿಸಬೇಕೆಂದು ಹಾಗೂ ಎಬಿವಿಪಿ ಗೂಂಡಾಗಳ ಉದ್ದೇಶ ಪೂರ್ವಕವಾಗಿ ನಡೆಸಿರುವ ಈ ಹಲ್ಲೆಯ ಬಗ್ಗೆ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಹಾಗೂ ವಿಶ್ವ ವಿದ್ಯಾಲಯಗಳಲ್ಲಿ ಪ್ರಜಾಪ್ರಭುತ್ವ ( ಕ್ಯಾಂಪಸ್ ಡೆಮಾಕ್ರಸಿ ) ಉಳಿಸಬೇಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್, ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸುತ್ತದೆ.

ಇದನ್ನೂ ನೋಡಿ: ಧಾರವಾಡ | ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ಕಾಂಗ್ರೆಸ್–ಬಿಜೆಪಿಗೆ ಎಚ್ಚರಿಕೆಯ ಸಂಕೇತ! Janashakthi Media

Donate Janashakthi Media

Leave a Reply

Your email address will not be published. Required fields are marked *