ಕೊಲ್ಕೋತಾ: ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್ ನ ಇಬ್ಬರು ಸಚಿವರನ್ನು ಬಂಧಿಸಿದ ನಂತರ ಸಿಎಂ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಗೆ ಆಗಮಿಸಿ ನನ್ನನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ಬೆಳಗ್ಗೆ 10.50 ಕ್ಕೆ ಮಮತಾ ನಿಜಾಮ್ ಪ್ಯಾಲೇಸ್ ತಲುಪಿದ್ದಾರೆ, ಸೋಮವಾರ ಬೆಳಗ್ಗೆ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಶೋವನ್ ಚಟರ್ಜಿಯನ್ನು ವಶಕ್ಕೆ ತೆಗೆದುಕೊಂಡಿದೆ.
West Bengal: Minister Firhad Hakim arrives at the CBI office in connection with Narada Scam. pic.twitter.com/tcyVDdIeUT
— ANI (@ANI) May 17, 2021
ಸಿಬಿಐ ಕಚೇರಿಗೆ ತೆರಳುವ ಮೊದಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚೆಟ್ಲಾದ ಹಕೀಮ್ ಅವರ ನಿವಾಸಕ್ಕೆ ಹೋಗಿದ್ದರು ಎಂದು ವರದಿಯಾಗಿದೆ.
‘ನಾರದ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.