ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಜನರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು  ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಎನ್‌ಐಎ ಅಧಿಕಾರಿಗಳು ನೀಡಿದ ನಿಖರ  ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 40 ಸಜೀವ ಗುಂಡುಗಳು, ಎರಡು ಡ್ಯಾಗರ್‌,ಮೊಬೈಲ್‌,ರಿವಾಲ್ವಾರ್‌ ಸೇರಿದಂತೆ ಹಲವು ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಗೆ ತರಬೇತಿ ನೀಡಿದ್ದ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಐಸಿಸ್‌ ಉಗ್ರ ಸಂಘಟನೆಯೊಂದಿಗೆ ನಂಟು: ಶಿವಮೊಗ್ಗದಲ್ಲಿ ಇಬ್ಬರ ಬಂಧನ

2017 ರಲ್ಲಿ ಆರ್‌.ಟಿ ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಮಂದಿ ಜೈಲು ಸೇರಿದ್ದರು. ಅದರಲ್ಲಿ ಬಂಧಿತ ಐವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.  ಶಂಕಿತ ಉಗ್ರರ ಸಂಪರ್ಕ ಬೆಳೆಸಿ ಸ್ಪೋಟಕ್ಕೆ ಸಂಚು ರೂಪಿಸಿದ್ದರು. ನಗರದ ಹತ್ತು ಕಡೆ ಸ್ಫೋಟ ನಡೆಸಲು ಉದ್ದೇಶಿಸಿದ್ದರು ಎಂದು ಸಿಸಿಬಿ ವಿಚಾರಣೆಯಲ್ಲಿ ಗೊತ್ತಾಗಿದೆ.

ಬಂಧಿತ ಶಂಕಿತರು ತರಬೇತಿಗೆ ನಿತ್ಯ ಸಂಜೆ ಒಂದೆಡೆ ಸೇರುತ್ತಿದ್ದರು. ಅಲ್ಲಿ ಸ್ಪೋಟ ನಡೆಸುವ ಸಂಬಂಧ ತರಬೇತಿ ಪಡೆಯುತ್ತಿದ್ದರು.  ತರಬೇತಿ ಸ್ಥಳವನ್ನು ಪತ್ತೆ ಮಾಡಿದ ಸಿಸಿಬಿ ಪೊಲೀಸರು ಸಧ್ಯ ಅವರ ಹೆಸರನ್ನು ಗೌಪ್ಯವಾಗಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಡಿಯೋ ನೋಡಿಏನಿದು INDIA v/s NDA ?

 

Donate Janashakthi Media

Leave a Reply

Your email address will not be published. Required fields are marked *