ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರೆಂಟ್‌

Please follow and like us:

ಕೋಲ್ಕತ್ತಾ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಲುಧಿಯಾನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರೆಂಟ್ ಹೊರಡಿಸಿದ್ದಾರೆ

ಲುಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಕ್ಷ್ಯ ಹೇಳಲು ಸೋನು ಸೂದ್ ಅವರಿಗೆ ನ್ಯಾಯಾಲಯಕ್ಕೆ ಬರುವಂತೆ ಸೂಚಿಸಲಾಗಿತ್ತು. ಆದರೆ ಅವರು ಹಾಜರಾಗಲು ವಿಫಲರಾದ ಕಾರಣ ಬಂಧನ ವಾರೆಂಟ್ ಹೊರಡಿಸಲಾಗಿದೆ

ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲುಧಿಯಾನ ನ್ಯಾಯಾಲಯವು ನಿರ್ದೇಶಿಸಿದೆ

ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಫೆ.10 ಕ್ಕೆ ಕೋರ್ಸ್‌ ನಿಗದಿಪಡಿಸಿದೆ

Please follow and like us:
Donate Janashakthi Media

Leave a Reply

Your email address will not be published. Required fields are marked *