ಅರವಿಂದ ಕೇಜ್ರಿವಾಲ್‌ ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜತೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ಜಾರಿ ನಿರ್ದೇಶನಾಲಯದಿಂದ ತಮ್ಮ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ನ್ಯಾಯಮೂರ್ತಿಗಳಾದ ಸಂಜ್ವ್ ಖನ್ನಾ ಮತ್ತು ದೀಪಂಕರ್ ದತ್ತಾ ಪೀಠವು ಇಡಿ ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದಿಪಾಂಕರ್ ದತ್ತಾ ಅವರನ್ನು ಒಳಗೊಂಡ ನ್ಯಾಯಪೀಠವು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 19ರ ಪ್ರಕಾರ, ಕೇಜ್ರಿವಾಲ್ ಅವರ ಬಂಧನವು ಅಗತ್ಯವೇ ಅಥವಾ ಅಲ್ಲವೇ ಎಂಬ ಪ್ರಶ್ನೆಯನ್ನು ವಿಸ್ತೃತ ಪೀಠದಲ್ಲಿ ಪರಿಶೀಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಆಪರೇಷನ್‌ ಕಮಲ | ಎಎಪಿ ಶಾಸಕ ಕರ್ತಾರ್ ಸಿಂಗ್, ಮಾಜಿ ಸಚಿವ ರಾಜ್‌ಕುಮಾರ್ ಬಿಜೆಪಿ ಸೇರ್ಪಡೆ

ಅರವಿಂದ್ ಕೇಜ್ರಿವಾಲ್ ಅವರು 90 ದಿನಗಳಿಗೂ ಹೆಚ್ಚು ಕಾಲದಿಂದ ಕಾರಾಗೃಹ ವಾಸ ಅನುಭವಿಸಿದ್ದಾರೆ. ಅವರು ಒಬ್ಬ ಚುನಾಯಿತ ನಾಯಕ. ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬೇಕೇ ಅಥವಾ ಬೇಡವೇ ಎನ್ನುವುದು ಅವರ ವಿವೇಚನೆಗೆ ಬಿಟ್ಟ ಸಂಗತಿ. ಜೀವಿಸುವ ಹಕ್ಕನ್ನು ನಾವು ಪರಿಗಣಿಸುತ್ತೇವೆ. ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದರಿಂದ ಮಧ್ಯಂತರ ಜಾಮೀನಿನ ಮೇಲೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಲು ನಿರ್ದೇಶಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಘಟನೆಯ ಹಿನ್ನೆಲೆ : ದೆಹಲಿ ಮುಖ್ಯಮಂತ್ರಿಯನ್ನು ಮಾರ್ಚ್ 21 ರಂದು ಇಡಿ ಬಂಧಿಸಿತು, ಇದೀಗ ರದ್ದುಗೊಂಡಿರುವ ದೆಹಲಿ ಮದ್ಯ ನೀತಿಯಲ್ಲಿ ಲೋಪದೋಷಗಳನ್ನು ಸೃಷ್ಟಿಸಲು ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು ಕ್ರಿಮಿನಲ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದರು.

ಅದೇ ಸುಪ್ರೀಂ ಕೋರ್ಟ್ ಪೀಠವು ಮೇ ತಿಂಗಳಲ್ಲಿ ಕೇಜ್ರಿವಾಲ್‌ಗೆ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಎರಡು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಅವಧಿ ಮುಗಿದ ನಂತರ ಎಎಪಿ ಮುಖ್ಯಸ್ಥರು ತಿಹಾರ್ ಜೈಲಿಗೆ ಮರಳಿದ್ದರು.

ಜೂನ್ 20 ರಂದು ದೆಹಲಿಯ ವಿಚಾರಣಾ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿತು ಮತ್ತು ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ಅಪರಾಧದ ಆದಾಯದೊಂದಿಗೆ ಯಾವುದೇ ನೇರ ಸಾಕ್ಷ್ಯವನ್ನು ನೀಡಲು ಇಡಿ ವಿಫಲವಾಗಿದೆ ಎಂದು ಹೇಳಿದ್ದರು. ಇಡಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದೂ ನ್ಯಾಯಾಲಯ ಹೇಳಿತ್ತು. ಆದರೆ, ಈ ಆದೇಶಕ್ಕೆ ದೆಹಲಿ ಹೈಕೋರ್ಟ್ ಜೂನ್ 25ರಂದು ತಡೆ ನೀಡಿತ್ತು

ಇದನ್ನೂ ನೋಡಿ: ‘ಅಕ್ಕ ಕೇಳವ್ವ ನಾನೊಂದ ಕನಸ ಕಂಡೆ – ಗಾಯನ : ಶೃತಿವೀಣಾ ವಿಶ್ವನಾಥನ್ Janashakthi Media

Donate Janashakthi Media

Leave a Reply

Your email address will not be published. Required fields are marked *