ನವದೆಹಲಿ: ಜಾಮೀನು ಪಡೆದು ಆರು ತಿಂಗಳ ಬಳಿಕ ಜೈಲಿನಿಂದ ಹೊರನಡೆದ ಎರಡು ದಿನಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು, 15 ಸೆಪ್ಟೆಂಬರ್, ಮಧ್ಯಾಹ್ನ ನಡೆದ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ ಬಂಧನದ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ಅರವಿಂದ್ ಕೇಜ್ರಿವಾಲ್, ದೆಹಲಿಯ ಆಪ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪೊಕ್ಸೋ: ಒಂದು ಕಠಿಣವಾದ ಕಾನೂನು ನಿಜ ಆದರೂ ನ್ಯಾಯದ ದಾರಿ ಗಾವುದ ದೂರವೇ….
ಇನ್ನೆರಡು ದಿನಗಳಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರ ಬಳಿ ಹೋಗಿ ಮತ್ತೆ ಜನಾಶಿರ್ವಾದ ಪಡೆದು ಅಧಿಕಾರಕ್ಕೆ ಬರುತ್ತೇನೆ. ಕೇಜ್ರಿವಾಲ್ ಪ್ರಾಮಾಣಿಕವಾಗಿದ್ದರೆ ಮತ್ತೆ ಆಪ್ ಗೆ ಮತ ಹಾಕಿ ಎಂದು ಕರೆ ನೀಡಿದ್ದಾರೆ.
ನವೆಂಬರ್ ನಲ್ಲಿ ದೆಹಲಿ ವಿಧಾನಸಭೆ ಚುನಾವಣೆಗೆ ಒತ್ತಾಯಿಸಲಾಗುತ್ತಿದೆ. ಆರೋಪಗಳನ್ನು ಹೊತ್ತು ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ. ನಾನು ಪ್ರಾಮಾಣಿಕವಾಗಿದ್ದರೆ ಮಾತ್ರ ನನಗೆ ಆಶಿರ್ವಾದ ಮಾಡಿ ಮತ್ತೆ ಆಯ್ಕೆ ಮಾಡಿ ಎಂದು ಹೇಳಿದ್ದಾರೆ.
ಇದನ್ನೂ ನೋಡಿ: ಬಿಡಿಎ ಕಾಂಪ್ಲೆಕ್ಸ್ ಖಾಸಗೀಕರಣ ಮಾಡಿದ್ರೆ ನಿಮ್ಮ ಸರ್ಕಾರ ಉಳಿಯಲ್ಲ – ಕಾಂಗ್ರೆಸ್ ಗೆ ಎಚ್ಚರಿಸಿದ ಸಿಪಿಐಎಂ ನಾಯಕ