ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದು,  ಅವರ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.

ಇದನ್ನು ಓದಿ : ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ಗೆ ಜಾಮೀನು ಮಂಜೂರು

ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ನ್ಯಾಯಾಂಗದ ಅವಧಿ ಮುಗಿದ ನಂತರ ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಜ್ರಿವಾಲ್ ವಿರುದ್ಧ ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೆ ಎಂಬುದರ ಕುರಿತು ನ್ಯಾಯಾಲಯವು ಪ್ರಸ್ತುತ ಸಿಬಿಐ ವಾದಗಳನ್ನು ಆಲಿಸುತ್ತಿದೆ.

ಇದನ್ನು ನೋಡಿ : ನೀಟ್ ಎಡವಟ್ಟು : ಕೆಇಎ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆJanashakthi Media

Donate Janashakthi Media

Leave a Reply

Your email address will not be published. Required fields are marked *