ಮುಂಬೈ: ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ಲೀನ್ ಚಿಟ್ ನೀಡಿದೆ. ಅಕ್ಟೋಬರ್ ತಿಂಗಳಲ್ಲಿ ಮುಂಬೈನ ಕ್ರೂಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಹಡಗಿನ ಮೇಲೆ ಮಾದಕ ವಸ್ತು ನಿಯಂತ್ರಣ ದಳ(ಎನ್‌ಸಿಬಿ) ದಾಳಿ ನಡೆಸಿದಾಗ ಶಾರುಖಾನ್ ಪುತ್ರ ಸೇರಿದಂತೆ ಅನೇಕರನ್ನು ಬಂಧಿಸಿತ್ತು. ಆದರೆ ಇದೀಗ ಎನ್‌ಸಿಬಿಯು ಆರ್ಯಖಾನ್ ಗೆ ಕ್ಲೀನ್ ಚಿಟ್ ನೀಡಿದೆ. ಈ ಪ್ರಕರಣದಲ್ಲಿ ಇತರ ನಾಲ್ವರೊಂದಿಗೆ ಸಂಸ್ಥೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಶಾರುಖ್ ಪುತ್ರನ ಹೆಸರಿಲ್ಲ .
ಐಷಾರಾಮಿ ಹಡಗಿನಲ್ಲಿ ಶೋಧಕಾರ್ಯ ನಡೆಸಿದ್ದ ಎನ್‌ಸಿಬಿಯ ವಿಶೇಷ ತಂಡ ಎಸ್‌ಐಟಿಯ, ಕಾರ್ಯಾಚರಣೆ ವೇಳೆ ಕಾನೂನು ನಿಯಮಗಳನ್ನು ಎನ್‌ಸಿಬಿ ತಂಡವು ಪಾಲಿಸಿಲ್ಲ ಎಂದು ತಿಳಿದು ಬಂದಿದೆ. ಆರ್ಯನ್‌ಖಾನ್ ನನ್ನು ಮಾದಕ ದ್ರವ್ಯದ ವಿಷಯದ ಮೇರೆಗೆ ಬಂಧಿಸಿದ ನಂತರ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿಲ್ಲ. ಆರ್ಯನ್ ಖಾನ್ ಅವರ ವಾಟ್ಸಾಪ್ ಚಾಟ್ ಅನ್ನು ಧೃಡೀಕೃತ ಭೌತಿಕ ಸಾಕ್ಷಿಯಾಗಿ ತನಿಖಾ ತಂಡ ಸಲ್ಲಿಸಿಲ್ಲ, ಕಾನೂನಿನ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಎನ್‌ಸಿಬಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾದ ಯಾವ ಆರೋಪಿಗಳಿಗೂ ಆರ್ಯಖಾನ್‌ನೊಂದಿಗೆ ಪರಸ್ಪರ ಸಂಪರ್ಕವಿಲ್ಲ ಎಂಬುವುದು ತನಿಖೆಯಿಂದ ತಿಳಿದು ಬಂದಿದೆ. ತನಿಖಾ ತಂಡ ವಶಪಡಿಸಿಕೊಂಡಿದ್ದ ಆರ್ಯನ್ ಅವರ ಮೊಬೈಲ್ ಫೋನ್ ತೆರೆಯುವಾಗಲೂ ಕಾನೂನು ಪ್ರಕ್ರಿಯೆಗಳನ್ನು ಪಾಲಿಸಿಲ್ಲ’ ಎಂದು ಅವರು ಮಾಹಿತಿನೀಡಿದ್ದಾರೆ.
ಆರ್ಯನ್ ಖಾನ್ ಅವರನ್ನು ಬಂಧಿಸಿದ್ದ ಮಾದಕ ದ್ರವ್ಯ ನಿಯಂತ್ರಣ ದಳದ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಣಕಾಸು ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕಳೆದ ವರ್ಷ ಮುಂಬೈನಲ್ಲಿ ಕ್ರೂಸ್ ಶಿಪ್ ನ ಮೇಲೆ ಎನ್‌ಸಿಬಿ ದಾಳಿ ನಡೆಸಿದಾಗ, ಮಾದಕ ವಸ್ತುಗಳು ಪತ್ತೆಯಾಗಿದ್ದವು. ಆರ್ಯನ್ ಮತ್ತು ಮೋಹಕ್ ಹೊರತುಪಡಿಸಿ ಎಲ್ಲಾ ಆರೋಪಿಗಳು ಮಾದಕ ದ್ರವ್ಯಗಳನ್ನು ಹೊಂದಿದ್ದರು ಎಂದು ಹಿರಿಯ ಎನ್‌ಸಿಬಿ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ಚಾರ್ಜ್ ಶೀಟ್ ನಲ್ಲಿರುವ ಹೇಳಿಕೆಯನ್ನು ತಿಳಿಸಿದ್ದಾರೆ.