ಅಶೋಕ ಅವರೇ, ವಿಪಕ್ಷ ನಾಯಕನ ಸ್ಥಾನಕ್ಕೆ ಯಾರಿಗೆ ಬಕೆಟ್ ಹಿಡಿದಿದ್ದೀರಿ| ಕಾಂಗ್ರೆಸ್ ಪ್ರಶ್ನೆ

 

ಬೆಂಗಳೂರು: ನಾಯಕತ್ವ ಹಾಗೂ ಪ್ರತಿಷ್ಠೆಗಾಗಿ ಬಿಜೆಪಿ ನಾಯಕರ ಮಧ್ಯೆ ನಡೆಯುತ್ತಿರುವ ಆಂತರಿಕ ತಿಕ್ಕಾಟವು ಆಡಳಿತಾರೂಢ ಕಾಂಗ್ರೆಸ್ಗೆ ವರವಾಗಿ ಪರಿಣಮಿಸಿದೆ. ವಿಪಕ್ಷ

ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿಕೆ ಪ್ರಸ್ತಾಪಿಸಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘ಆರ್‌.ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿದ್ದೀರಿ? ಯಾವ ಬ್ರ್ಯಾಂಡ್ ಬಕೆಟ್ ಹಿಡಿದಿದ್ದೀರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿದ್ದೀರಿ’ ಎಂದು ಟೀಕಿಸಿದೆ.

ಇದನ್ನೂ ಓದಿ:ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ ಆಯ್ಕೆ

ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು… ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿ ‘ಬಕೆಟ್ ಜನತಾ ಪಾರ್ಟಿ’ ಸೇರ್ಪಡೆಯಾಗಿದೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಗುರುವಾರ ಸದನದಲ್ಲಿ ಎಸ್.ಆರ್. ವಿಶ್ವನಾಥ್‌ ಅವರು ತಮ್ಮ ನಾಯಕ ಅಶೋಕ ಅವರ ವಿರುದ್ಧ ಅವಾಚ್ಯ ಶಬ್ದ ಬಳಸಿ ಕೂಗಾಡಿದಿದ್ದರು. ಅಶೋಕ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡರೂ, ಮುಖ ಕಳಾಹೀನವಾಗಿತ್ತು.

ಎಸ್.ಆರ್. ವಿಶ್ವನಾಥ್ಹೇಳಿದ್ದೇನು?

ಸಭಾತ್ಯಾಗ ಮಾಡಿ ಅಶೋಕ ಹೊರಬರುತ್ತಿದ್ದಂತೆ ವಿಜಯೇಂದ್ರ ಜತೆ ಧುಮುಗುಡುತ್ತಲೇ ಹೊರಬಂದ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್, ‘ಬಕೆಟ್, ಬಕೆಟ್‌’ ಎಂದು ಹೇಳುತ್ತಲೇ ಇದ್ದರು.

ಮೊದಲೇ ಹೊರಬಂದಿದ್ದ ಅಶೋಕ, ಸಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ ಮತ್ತಿತರರು ವಿರೋಧ ಪಕ್ಷದ ಮೊಗಸಾಲೆಯ ಕೊಠಡಿಯಲ್ಲಿ ಇದ್ದರು.

ಬಾಗಿಲಿನಲ್ಲಿ ನಿಂತ ವಿಶ್ವನಾಥ್‌, ‘ಇಂತಹ . . . . ಮಕ್ಕಳನ್ನು ನಾಯಕರಾಗಿ ಮಾಡಿದರೆ ಪಕ್ಷ ಮುಳುಗಿ ಹೋಗದೇ ಇನ್ನೇನಾಗುತ್ತದೆ?. ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವರು ಇನ್ನೇನು ಮಾಡುತ್ತಾರೆ’ ಎಂದು ಏರಿದ ಧ್ವನಿಯಲ್ಲಿ ಕೂಗಿದ್ದರು.

ಇದನ್ನೂ ಓದಿ:ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೇ ಕೊಡ್ಬೇಕು, ಈ ವಿಷಯದಲ್ಲಿ ರಾಜಿ ಇಲ್ಲ| ಶಾಸಕ ಬಸನಗೌಡ ಪಾಟೀಲ ಯತ್ನಾಳ್

‘ಹೊಂದಾಣಿಕೆ ರಾಜಕಾರಣ (ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್‌) ಮಾಡಿಕೊಂಡೇ ಬಂದು ಅಧಿಕಾರ ಹಿಡಿದರು. ಇದಲ್ಲದೇ ಇನ್ನೇನು ಮಾಡಲು ಸಾಧ್ಯ’ ಎಂದು ಎಗರಾಡಿದರು. ಕೆಲವು ಶಾಸಕರು ಅವರನ್ನು ಅಲ್ಲಿಂದ ಕರೆದೊಯ್ದರು. ಕೆಲವು ಶಾಸಕರು ತಮ್ಮ ಪಾಡಿಗೆ ಮೊಗಸಾಲೆಯಲ್ಲಿ ಕುಳಿತರೆ, ಮತ್ತಷ್ಟು ಮಂದಿ ವಿಜಯೇಂದ್ರ ಸುತ್ತ ಕುಳಿತಿದ್ದರು.

‘ವಿಜಯೇಂದ್ರ ಅವರಿಗೆ ಹೋರಾಟವನ್ನು ಸಭಾತ್ಯಾಗಕ್ಕೆ ಸೀಮಿತಗೊಳಿಸುವುದು ಇಷ್ಟವಿರಲಿಲ್ಲ. ಇನ್ನೊಂದು ಹಂತಕ್ಕೆ ಹೋರಾಟ ತೆಗೆದುಕೊಂಡು ಹೋಗಬೇಕು ಎಂಬುದಿತ್ತು’ ಎಂದು ಶಾಸಕರೊಬ್ಬರು ಹೇಳಿದ್ದರು.

ಬಿಜೆಪಿ ನಾಯಕರಲ್ಲಿಯೇ ಗೊಂದಲ:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡು ಆರು ತಿಂಗಳ ನಂತರ ಬಿಜೆಪಿ ಹೈಕಮಾಂಡ್‌ ಅಳೆದು ತೂಗಿ ಕರ್ನಾಟಕದ ಪ್ರತಿಪಕ್ಷ ನಾಯಕರನ್ನಾಗಿ ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಹಾಗೂ ಒಕ್ಕಲಿಗ ನಾಯಕರಾದ ಆರ್‌ ಅಶೋಕ್‌ ಅವರನ್ನ ಆಯ್ಕೆ ಮಾಡಿದ್ದು, ಬಿಜೆಪಿಯಲ್ಲಿ ಕಿಡಿ ಹೊತ್ತಿಕೊಳ್ಳುತ್ತಿದೆ ಎನ್ನುವ ಮಾತುಗಳು ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿವೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್‌ ಗೆ ಚಾಕು ಇರಿತದ ಕುರಿತು ಸದನದಲ್ಲಿ ಸರ್ಕಾರ ನೀಡಿದ ಉತ್ತರಕ್ಕೆ ವಿರೋಧಿಸಿ ಸಭಾತ್ಯಾಗಕ್ಕೆ ಪ್ರತಿಪಕ್ಷವಾದ ಬಿಜೆಪಿಯಲ್ಲಿಯೇ ಗೊಂದಲ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ಪೃಥ್ವಿ ಸಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಧರಣಿ ನಡೆಸಲು ಬಿ ವೈ ವಿಜಯೇಂದ್ರ ಹಾಗೂ ಬಿಜೆಪಿ ಶಾಸಕರು ತೀರ್ಮಾನಿಸಿದ್ದರು. ಆದರೆ, ವಿಪಕ್ಷ ನಾಯಕ ಆರ್‌ ಅಶೋಕ್‌ ಏಕಾಏಕಿ ಸಭಾತ್ಯಾಗ ಎಂದು ಪ್ರಕಟಿಸಿ ಸದನದಿಂದ ಹೊರ ಹೋಗಿದ್ದಾರೆ. ಈ ವೇಳೆ ಸದನದಲ್ಲಿ ಬಿಜೆಪಿ ನಾಯಕರಲ್ಲಿಯೇ ಗೊಂದಲ ಉಂಟಾಗಿದೆ.

ಈ ವೇಳೆ ವಿಪಕ್ಷ ನಾಯಕ ಆರ್‌ ಅಶೋಕ್‌ ವಿರುದ್ಧ ಶಾಸಕರಾದ ಎಸ್‌ ಆರ್‌ ವಿಶ್ವನಾಥ್‌ ಮತ್ತು ಅಭಯ್‌ ಪಾಟೀಲ್‌ ಅವರು ಕಿಡಿಕಾರಿದ್ದಾರೆ. ಈ ವೇಳೆ ಆರ್‌ ಅಶೋಕ್‌ ಅವರನ್ನು ಅಡ್ಜಸ್ಟಮೆಂಟ್‌ ಗಿರಾಕಿ ಎಂದು ಬೈಯ್ದುಕೊಂಡು ಸದನದಿಂದ ಹೊರ ನಡೆದಿದ್ದಾರೆ. ಈ ವೇಳೆ ಅಭಯ್‌ ಪಾಟೀಲ್‌ ಅವರು ಅಶೋಕ್‌ ರಿಂದಾಗಿ ರಾಜಕೀಯಕ್ಕೆ ಬಂದಿಲ್ಲ, ಶಾಸಕಾಂಗ ಸಭೆಗೆ ಬರುವುದಿಲ್ಲ ಎಂದು ಕಿಡಿಕಾರಿದ್ದರು.

ಈಗಾಗಲೇ ವಿಪಕ್ಷ ನಾಯಕರಾಗಿ ಆರ್‌ ಅಶೋಕ್‌ ಅವರನ್ನ ನೇಮಕ ಮಾಡಿರುವುದಕ್ಕೆ ಉತ್ತರ ಕರ್ನಾಟಕ ಭಾಗ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಬೆಂಗಳೂರು ಭಾಗದ ನಾಯಕರಾದ ಎಸ್‌ ಆರ್‌ ವಿಶ್ವನಾಥ್‌ ಸೇರಿದಂತೆ ಹಲವು ನಾಯಕರು ಅಸಮಾಧಾನ ಹೊರ ಹಾಕಿದ್ದು, ವಿಪಕ್ಷ ನಾಯಕರನ್ನಾಗಿ ಆರ್‌ ಅಶೋಕ್‌ ಅವರನ್ನ ನೇಮಕ ಮಾಡಿದ ಬೆನ್ನಲ್ಲೇ ಬಿಜೆಪಿ ಮನೆಯೊಂದ ಮೂರು ಬಾಗಿಲಾಗಿದೆಯೇ ಎಂಬ ಪ್ರಶ್ನೆ ಮೂಡಿದ್ದು, ಈ ಎಲ್ಲಾ ಅಸಮಾಧಾನವನ್ನ ಹೇಗೆ ಶಮನಗೊಳಿಸುತ್ತಾರೆ ಎಂಬುದೇ ಕೂತಹಲಕಾರಿ ಸಂಗಾತಿಯಾಗಿದೆ. ಅಸಮಧಾನದ ಹೊಗೆಯ ಮಧ್ಯಯೇ  ಮುನ್ನಡೆಯುತ್ತಿರುವ  ಬಿಜೆಪಿಗೆ ಬಿಸಿತುಪ್ಪವಾಗಿರುವ ಬಿಜೆಪಿಯ ಕೆಲ ನಾಯಕರನ್ನು ತಣ್ಣಗಾಗಿಸುವವರ್ಯಾರು ಎಂಬುದೆ ಯಕ್ಷ ಪ್ರಶ್ನೆಯಾಗಿದೆ.

Donate Janashakthi Media

Leave a Reply

Your email address will not be published. Required fields are marked *