ನವದೆಹಲಿ: ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಅಂದೇ ಫಲಿತಾಂಶ ಹೊರಬೀಳಲಿದೆ ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.ಇಬ್ಬರೂ ದಕ್ಷಿಣ ಭಾರತ ಮೂಲದವರಾಗಿದ್ದಾರೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸುದರ್ಶನ ರೆಡ್ಡಿ ತೆಲಂಗಾಣದವರು. ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ತಮಿಳುನಾಡಿನವರು. ಈಗಾಗಲೇ ಚುನಾವಣಾ ಕಣದಲ್ಲಿ ಇಬ್ಬರು ಅಭ್ಯರ್ಥಿ ಅಂತಿಮವಾಗಿದ್ದು. ನವದೆಹಲಿ
ಉಪರಾಷ್ಟ್ರಪತಿ ಚುನಾವಣೆ ಕುರಿತಂತೆ ಸಂಸತ್ ಸಂಕೀರ್ಣದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ಎನ್‌ಡಿಎ ಸಂಸದರಿಗೆ ಕಾರ್ಯಾಗಾರ ನಡೆಸಲಾಯಿತು. ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಭಾಗವಹಿಸಿದ್ದರು. ನವದೆಹಲಿ
ಇದನ್ನೂ ಓದಿ: ಸೆಪ್ಟೆಂಬರ್ 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರಿಗೆ ನಮ್ಮ ಪಕ್ಷ ಬೆಂಬಲ ನೀಡಲಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ತೆಲಂಗಾಣದ ಮುಖ್ಯಮಂತ್ರಿಗಳು ನನ್ನೊಂದಿಗೆ ಮಾತನಾಡಿ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸುದರ್ಶನ್ ರೆಡ್ಡಿ ಅವರನ್ನು ಬೆಂಬಲಿಸುವಂತೆ ವಿನಂತಿಸಿದ್ದಾರೆ” ಎಂದು ಹೇಳಿದ್ದಾರೆ.
“ಎಐಎಂಐಎಂ ಪಕ್ಷವು ಹೈದರಾಬಾದ್‌ನವರೇ ಆದ ಗೌರವಾನ್ವಿತ ಮಾಜಿ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರಿಗೆ ತನ್ನ ಬೆಂಬಲ ನೀಡುತ್ತದೆ” ಎಂದು ಹೇಳಿರುವ ಅವರು, “ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಸುದರ್ಶನ್ ರೆಡ್ಡಿ ಅವರೊಂದಿಗೆ ಮಾತನಾಡಿ, ಅವರಿಗೆ ಶುಭಾಶಯಗಳನ್ನು ತಿಳಿಸಿದೆ ಎಂದು ಓವೈಸಿ ಬರೆದುಕೊಂಡಿದ್ದಾರೆ.
ಸೆಪ್ಟೆಂಬರ್ 9ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಜ್ಯಸಭೆಯ 233 ಚುನಾಯಿತ ಮತ್ತು 12 ನಾಮನಿರ್ದೇಶಿತ ಸದಸ್ಯರು, ಲೋಕಸಭೆಯ 543 ಸದಸ್ಯರು ಮತ ಚಲಾಯಿಸಬಹುದು. ಒಟ್ಟು 788 ಸದಸ್ಯರ ಪೈಕಿ 6 ಸ್ಥಾನಗಳು ಖಾಲಿ ಇದ್ದು, ಮತಪಟ್ಟಿಯಲ್ಲಿ 782 ಜನರಿದ್ದಾರೆ. ಗೆಲ್ಲಲು 392 ಮತಗಳ ಅಗತ್ಯವಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ 427 ಸದಸ್ಯಬಲವನ್ನು ಹೊಂದಿದ್ದರೆ, ಇಂಡಿಯಾ ಬ್ಲಾಕ್ 355 ಸದಸ್ಯರನ್ನು ಹೊಂದಿದೆ. ಆದರೆ ಚುನಾವಣೆಯಲ್ಲಿ ಪಕ್ಷದ ಹೊರತಾಗಿ ಪ್ರಾದೇಶಿಕ ಭಾವನೆಯೂ ಮಹತ್ವದ ಪಾತ್ರ ವಹಿಸಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ನೋಡಿ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಒಳಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ Janashakthi Media
