18 ತಿಂಗಳ ಹಿಂದಿನ ಸರ್ಕಾರದ ಭರವಸೆ ಈಡೇರಿಲ್ಲ; ಫ್ರೀಡಂ ಪಾರ್ಕ್‌ನಲ್ಲಿ ಹಗಲು-ರಾತ್ರಿ ಧರಣಿ ಮುಂದುವರಿಕೆ
ಬೆಂಗಳೂರು: ಮಾಸಿಕ 15 ಸಾವಿರ ರೂ. ಗೌರವಧನ ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆ ಈಡೇರಿಸುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದುವರಿಸಿರುವ ಕಾರ್ಯಕರ್ತೆಯರು, ಸರ್ಕಾರದ ವಿಳಂಬ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಶಾ
ಈ ಹಿಂದೆ 2025ರ ಜನವರಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ 18 ತಿಂಗಳು ಕಳೆದರೂ ಭರವಸೆ ಈಡೇರಿಲ್ಲ. ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇನ್ನಷ್ಟು ಸಮಯ ನೀಡುವಂತೆ ಮನವಿ ಮಾಡಿರುವುದನ್ನು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ರಾಮಾ ಟಿ.ಸಿ. ಟೀಕಿಸಿದ್ದಾರೆ. ಸರ್ಕಾರದ ಭರವಸೆಗಳಿಗಾಗಿ ಈಗಾಗಲೇ ಸಾಕಷ್ಟು ಕಾಲ ಕಾಯಲಾಗಿದೆ. ಇನ್ನೂ ಸಮಯ ಕೇಳುತ್ತಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಶಾ
ಇದನ್ನೂ ಓದಿ : ದಲಿತ, ಆದಿವಾಸಿ ವಿದ್ಯಾರ್ಥಿಗಳ ಹಕ್ಕಿಗಾಗಿ ಆಗ್ರಹ: ರೋಹಿತ್ ವೇಮುಲ ಕಾಯ್ದೆ ಜಾರಿಗೆ ಒತ್ತಾಯ
ಆಶಾ ಕಾರ್ಯಕರ್ತೆಯರ ಸಂಘವು ಸರ್ಕಾರದೊಂದಿಗೆ ಹಲವು ಬಾರಿ ಮಾತುಕತೆ ನಡೆಸಿದೆ. 2025ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅಂದಿನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಲಾಗಿತ್ತು. 2026ರ ಆಗಸ್ಟ್ 18ರಂದು ಹಾಲಿ ಸಚಿವ ಯು.ಟಿ. ಖಾದರ್ ಅವರೊಂದಿಗೂ ಮಾತುಕತೆ ನಡೆಸಲಾಗಿತ್ತು. ಆದರೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಸಂಘ ತಿಳಿಸಿದೆ.
ಪ್ರತಿಭಟನೆ ಸಂಘಟನೆಯ ಒತ್ತಡದಿಂದ ನಡೆಯುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿರುವ ಸಂಘ, ರಾಜ್ಯದ ಎಲ್ಲ 31 ಜಿಲ್ಲೆಗಳ ಪ್ರತಿನಿಧಿಗಳು ಒಟ್ಟಾಗಿ ಪ್ರತಿಭಟನೆ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಇತರ ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳವನ್ನು ವಿಳಂಬ ಮಾಡಬಾರದು ಎಂಬುದು ಸಂಘದ ಒತ್ತಾಯವಾಗಿದೆ.
ಪ್ರತಿಭಟನಾ ಸ್ಥಳಕ್ಕೆ ನಟಿ ಕರುಣ್ಯ ರಾಮ್ ಭೇಟಿ ನೀಡಿ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟದೊಂದಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದು, ಅಕ್ಕಿ, ಬಿಸ್ಕತ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಿದ್ದಾರೆ. ಆಶಾ
ಇದನ್ನೂ ನೋಡಿ : ನವೆಂಬರ್ ಕನ್ನಡ ಬೇಡ… ಅನುದಿನವೂ ಕನ್ನಡ ಕನ್ನಡ ಎಂದು ಉಸಿರಾಡಬೇಕು – ಶ್ರೀನಾಥ್ ವಸಿಷ್ಠ Janashakthi Media
