ಮೂರೂವರೆ ವರ್ಷದ ಮಗು ಮೇಲೆ ಹಲ್ಲೆ; ಉಡುಪಿಯಲ್ಲಿ ಅಮಾನವೀಯ ಘಟನೆ

ಉಡುಪಿ :ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ಹೆಬ್ರಿ  ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮೂರೂವರೆ 

ತೀವ್ರವಾಗಿ ಹಲ್ಲೆ ಇಂದಾಗಿ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮೂರು ವರ್ಷದ ಪ್ರೇರಿತ್‌ ಹಲ್ಲೆ ಮಾಡಲಾಗಿದೆ. ಮೈ ಹುಷಾರಿಲ್ಲ ಅಂತ ಪ್ರೇರಿತ್​ನನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ  ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್​ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತ್​​ನನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್​ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.  ಮೂರೂವರೆ 

ಇದನ್ನು ಓದಿ : ಗನ್ ತೋರಿಸಿ ಜಿ.ಪಂ ಮಾಜಿ ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ; 1,691 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಅಮಾವಾಸ್ಯೆಬೈಲು ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ. ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್​ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ, ತಡವರಿಸಿದ್ದಾರೆ.

ಪ್ರಕರಣ ಸಂಬಂಧ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಗವಿನ ದೇಹದ ಮೇಲೆ ಗಾಯದ ಕಲೆ ಇದೆ. ಮೇಲ್ನೋಟಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವುದು ಗೊತ್ತಾಗುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದೆ. ಮಗು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲಿದ್ದೇವೆ ಎಂದು ಹೇಳಿದರು.

ಇದನ್ನು ನೋಡಿ : ಅಶ್ಲೀಲ ಸಿಡಿಗಳ ತಯಾರಕ ಮುನಿರತ್ನ – ವಕೀಲ ಜಗದೀಶ್‌ ಆರೋಪJanashakthi Media

Donate Janashakthi Media

Leave a Reply

Your email address will not be published. Required fields are marked *