ಜಮ್ಮು / ಹರ್ಯಾಣ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ.ಹರಿಯಾಣದಲ್ಲಿ ಹಾಗೂ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.
ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆದಿತ್ತು, ಸದ್ಯದ ಟ್ರೆಂಡ್ ಪ್ರಕಾರ 63 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, ಅದರಲ್ಲಿ 47 ಕಾಶ್ಮೀರದಲ್ಲಿ ಮತ್ತು 43 ಜಮ್ಮುವಿನಲ್ಲಿವೆ. ಇಲ್ಲಿ ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ಮತ್ತು ಎರಡನೇ ಹಂತದ ಮತದಾನ ಸೆಪ್ಟೆಂಬರ್ 25 ರಂದು ನಡೆಯಿತು. ಆರ್ಟಿಕಲ್ 370 ರದ್ದಾದ ನಂತರ ಇಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ ಜಮ್ಮು ಕಾಶ್ಮೀರದಲ್ಲಿ ಇಂಡಿಯಾ ಕೂಟ 47 ಕ್ಷೇತ್ರಗಳಲ್ಲಿ, ಬಿಜೆಪಿ 24 ಸ್ಥಾನಗಳಲ್ಲಿ, ಪಿಡಿಪಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.