ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಜಯಲಲಿತಾ ಯಿಂದ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿ ಜಯಲಲಿತಾ ವಾರಸುದಾರೆ ಜೆ.ದೀಪಾ ಸಲ್ಲಿಸಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. ನ್ಯಾಯಮೂರ್ತಿ ವಿ ಶ್ರಿಶಾನಂದ ಅವರಿದ್ದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಜಾತಿಗಣತಿ ವರದಿ ಜಾರಿ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆಗೆ ಸಾಧ್ಯತೆ
ಅಂದಹಾಗೇ ಕಳೆದ ಮಾರ್ಚ್ 6, 7ರಂದು ದಿವಂಗತ ಜಯ ಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಗೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ಹಸ್ತಾಂತರಿಸಬೇಕಿತ್ತು. ಆದರೇ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದಂತೆ ಎಂಬುದಾಗಿ ಜೆ.ದೀಪಾ ಅರ್ಜಿಯನ್ನು ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಎಸ್ ಪಿಪಿ ಕಿರಣ್ ಜವಳಿ ಆಕ್ಷೇಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದರು. ಹೀಗಾಗಿ ಜೆ.ದೀಪಾ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಜಪ್ತಿ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸುವಂತೆ ಆದೇಶಿಸಿದೆ.
ಇದನ್ನೂ ನೋಡಿ : ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ Janashakthi Media