ಕಾಂಗ್ರೆಸಿಗೆ ರಾಜ್ಯದಲ್ಲಿ ಕನಿಷ್ಠ 15 ಸ್ಥಾನಗಳು

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸಿಗೆ ಕನಿಷ್ಠ 15 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕನಿಷ್ಠ 15 ಸ್ಥಾನಗಳು, ಗರಿಷ್ಠ20 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ. ಬಿಜೆಪಿಯವರಂತೆ 28ಕ್ಕೂ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ ಎಂದರು.

ಇದನ್ನೂ ಓದಿ: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ

ಇನ್ನು ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಚಿವ ಸಂಪುಟ ವಿಸ್ತರಣೆ ಪುನರಚನೆಯಾಗಲಿದೆಯಾ? ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ ಹೈಕಮಾಂಡ್ ನಿರ್ದೇಶನದಂತೆ  ನಮ್ಮ ಪಕ್ಷದಲ್ಲಿ  ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು.

ಇದನ್ನೂ ನೋಡಿ: ಪಂಜಾಬ್ ಲೋಕಸಭೆ : ” ದೆಲ್ಲಿ ದಾರಿ ಬಂದ್ ಮಾಡಿದ್ದ ಬಿಜೆಪಿಗೆ ಹಳ್ಳಿ ದಾರಿ ಬಂದ್ ” ವ್ಯಾಪಕಗೊಂಡ ಅನ್ನದಾತರ ಆಕ್ರೋಶ

Donate Janashakthi Media

Leave a Reply

Your email address will not be published. Required fields are marked *