ಬೆಂಗಳೂರು: ರಾಜ್ಯ ಸರಕಾರ ಜಾರಿ ಮಾಡಿರುವ ಅವೈಜ್ಞಾನಿಕ ಆದೇಶದಿಂದಾಗಿ 10 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸಕಳೆದುಕೊಳ್ಳುವಂತಾಗಿದೆ ಹಾಗಾಗಿ ಆ ಆದೇಶವನ್ನು ಹಿಂಪಡೆದು ಎಲ್ಲರಿಗೂ ಕೆಲಸ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಅಸೋಸಿಯೇಷನ್ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಐಡಿಡಬ್ಲ್ಯೂಎ) ಸಂಘಟನೆಯ ರಾಜ್ಯ ಕಾರ್ಯದರ್ಶಿ ಗೌರಮ್ಮ, ರಾಜ್ಯ ಮುಖಂಡರಾದ ಕೆ.ಎಸ್ ವಿಮಲಾ, ಲಕ್ಷ್ಮೀ ಅವರು ಭಾಗವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಅಸೋಸಿಯೇಷನ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ, ಅತಿಥಿ ಉಪನ್ಯಾಸಕರಾದ ಫಯಾಜ್, ನಾಗಣ್ಣ, ಶಿಲ್ಪಾ ಸೇರಿದಂತೆ ನೂರಾರು ಅತಿಥಿ ಉಪನ್ಯಾಸಕರು ಭಾಗಿಯಾಗಿದ್ದಾರೆ.