ರಾಮನಗರ| ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ; ಮೂವರ ಬಂಧನ

ರಾಮನಗರ: ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದ ಅರಣ್ಯದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದವರನ್ನು ಪ್ರಶ್ನಿಸಿದಕ್ಕೆ ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಾಹನಕ್ಕೆ ಬೆಂಕಿ ಹಾಕಲು ಮುಂದಾಗಿದ್ದ ರೌಡಿ ಶೀಟರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ

ಅರಣ್ಯದಲ್ಲಿ ಆರೋಪಿಗಳು ಎಣ್ಣೆ ಪಾರ್ಟಿ ಮಾಡುತ್ತಿದ್ದೂ, ಈ ವೇಳೆ ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಾದ ರೌಡಿ ಶೀಟರ್ ಕಿರಣ್, ಸುಂದರ್ ಹಾಗು ಪ್ರತಾಪ್ ಎಂಬುವವರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು| ಹಕ್ಕಿ ಜ್ವರ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟನೆ

ಅಷ್ಟೇ ಅಲ್ಲದೆ ನಮ್ಮನ್ನೇ ಪ್ರಶ್ನೆ ಮಾಡ್ತೀಯ ಎಂದು ಹೇಳಿ ಅರಣ್ಯ ಇಲಾಖೆಯ ವಾಹನಕ್ಕೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಕೂಡಲೇ ಸಿಬ್ಬಂದಿಗಳು 112 ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ರೌಡಿ ಶೀಟರ್ ನನ್ನು ತಡೆಯಲು ಮುಂದಾಗಿದ್ದಾರೆ.

ಈ ವೇಳೆ ನಶೆಯಲ್ಲಿದ್ದ ಆರೋಪಿಗಳು ಪೊಲೀಸರ ಮೇಲೂ ಹಲ್ಲೆ ಮಾಡಿ ಅವರ ಕೈಯಲ್ಲಿದ್ದ ಟ್ಯಾಬ್ ಅನ್ನು ಒಡೆದು ರಂಪಾಟ ಮಾಡಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಈ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸದ್ಯ ಘಟನೆಗೆ ಸಂಬಂಧಪಟ್ಟಂತೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿದ್ದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ನೋಡಿ: ಅಹೋರಾತ್ರಿ ಹೋರಾಟಕ್ಕೆ ಚಾಲನೆ | ಶ್ರಮಿಕರ ಸಮಸ್ಯೆಗಳಿಗೆ ಪರಿಹಾರ ನೀಡಿ – ಮೀನಾಕ್ಷಿ ಸುಂದರಂ

Donate Janashakthi Media

Leave a Reply

Your email address will not be published. Required fields are marked *