ಬೀದರ್: ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನಡೆದ ಹನುಮಾನ್ ಜಾತ್ರೆಯ ಸಂದರ್ಭದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ಹಲ್ಲೆ ಘಟನೆ ಬೆಳಕಿಗೆ ಬಂದಿದೆ. ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ದಾಖಲಾಗಿದೆ. ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಒತ್ತಾಯಿಸಲಾಗಿದೆ.
ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ. ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್‌ಸಿ, ಎಸ್ಟಿ ದೌರ್ಜನ್ಯ ತಡ ಕಾಯ್ದೆಯಡಿ 73 ಜನರ ವಿರುದ್ಧ ಕೇಸ್ ದಾಖಲಾಗಿದೆ.
ಇದನ್ನೂ ಓದಿ: ಸ್ವಚ್ಛ ಭಾರತದ ಆಶಯವೂ ತಳಮಟ್ಟದ ವಾಸ್ತವವೂ ಉದಾತ್ತ ಧ್ಯೇಯದೊಂದಿಗೆ ಆರಂಭವಾದ ಅಭಿಯಾನಕ್ಕೆ ಇನ್ನೂ ಕಾಯಕಲ್ಪ ನೀಡಬೇಕಿದೆ
ನ.1 ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ನೋಡಿ: ಮೋದಿಯವರ ನೀತಿ : ಹಣಕಾಸು ಕಾಯ್ದೆಗಳ ದುರ್ಬಳಕೆ, ಸ್ವತಂತ್ರ ಮಾಧ್ಯಮಗಳ ಮೇಲೆ ದಬ್ಬಾಳಿಕೆ- WAN -IFRA, IAPA ವರದಿ