ಬೆಂಗಳೂರು: ನಿಧಿಗಾಗಿ ದತ್ತು ಪೋಷಕರಿಂದ ಮಗುವನ್ನು ಬಲಿ ಕೊಡಲು ಯತ್ನಿಸಿರುವ ಘಟನೆ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲೆಬೆಲೆಯ ಜನತಾ ಕಾಲೋನಿಯಲ್ಲಿ ನಡೆದಿದೆ.
ನಿಧಿಗಾಗಿ ಮನೆಯಲ್ಲಿ ಗುಂಡಿ ತೋಡಿ ಮಗು ಬಲಿಗಾಗಿ ಪೂಜೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ವೇಳೆ 8 ತಿಂಗಳ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: ಧಾರವಾಡ | ಪ್ರಸ್ತುತ ನಾಟಕಗಳು ಪ್ರೇಕ್ಷಕರ ಕೊರತೆ ಎದುರುಸುತ್ತಿವೆ – ಎಸ್.ಜಹಾಂಗೀರ
ಸೈಯದ್ ಇಮ್ರಾನ್ ಎಂಬುವರ ಮನೆಯಲ್ಲಿ ನಿಧಿಗಾಗಿ ಮಗು ಬಲಿ ಪೂಜೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಬೇರೆಯವರಿಂದ ಗಂಡು ಮಗುವನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.ಹುಣ್ಣಿಮೆ ಹಿನ್ನೆಲೆ ಮಗು ಬಲಿ ಕೊಡುತ್ತಿದ್ದಾರೆಂದು ಅಪರಿಚಿತರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಕರೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನೆಯನ್ನು ಪರಿಶೀಲಿಸಿದಾಗ ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಮಾಡಿದ್ದು ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಮಗುವನ್ನು ಶಿಶುಕೇಂದ್ರಕ್ಕೆ ರವಾನಿಸಿ ತನಿಖೆ ಮಾಡುತ್ತಿದ್ದಾರೆ. ಸೂಲೆಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ನೋಡಿ: ಮರ್ಯಾದೆಗೇಡು ಹತ್ಯೆ ತಡೆಗೆ ಪ್ರತ್ಯೇಕ ಕಾಯ್ದೆಗೆ ಸಿದ್ಧತೆ!?| ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
