ಬೆಂಗಳೂರು: ಇಂದು ಜುಲೈ .23 ಬೆಳಗ್ಗೆ, ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್ ಒಂದರಲ್ಲಿ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆಗೊಳಗಾದ ವಕೀಲೆ ವಿಮಲಾ ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಚಾಕು ಇರಿದ ಆರೋಪಿ. ಮ್ಯಾಜಿಸ್ಟ್ರೇಟ್
ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ಜಯರಾಮ ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.
ಇದನ್ನೂ ಓದಿ: ಬಲವಂತದ ಭೂಸ್ವಾಧೀನ ವಿರೋಧಿಸಿ ಹೋರಾಟ : ಸಿಎಂ ಮನೆಗೆ ಹೊರಟಿದ್ದ ರೈತರ ಮೇಲೆ ಪೋಲಿಸ್ ದೌರ್ಜನ್ಯ
ಬಳಿಕ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ, ವಕೀಲೆ ವಿಮಲಾಗೆ ಕೋರ್ಟ್ ಹಾಲ್ 1ರಲ್ಲಿ ಚಾಕು ಇರಿದಿದ್ದಾನೆ. ಸದ್ಯ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಇದನ್ನೂ ನೋಡಿ: ತ್ರಿವರ್ಣ ಧ್ವಜ ಬಣ್ಣದಿಂದ ಕಂಗೊಳಿಸುತ್ತಿರುವ ಹೇಮಾವತಿ ಡ್ಯಾಂ|Janashakthi Media