ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಅಂತಹದ್ದೇ ಒಂದು ಘಟನೆ ನಗರದ ಕುಂದಾನಗರಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ| ಬೆಲೆ ಏರಿಕೆ ವಿರುದ್ದ ಮೇ 2ರಂದು ಪ್ರತಿಭಟನೆ: ಸಲೀಂ ಅಹ್ಮದ್
ಮಹಾಂತೇಶ ಹಿಪ್ಪರಗಿ ಎಂಬಾತನೇ ಆರೋಪಿಯಾಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಕೂಡಲೇ ಬಾಲಕಿ ಕಿರುಚಿಕೊಂಡು ಹೊರ ಓಡಿದ್ದಾಳೆ.
ನಂತರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಐಗಳಿ ಠಾಣಾ ಪೊಲೀಸರು, ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ಮಹಾಂತೇಶನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.
ಇದನ್ನೂ ನೋಡಿ: ವಕ್ಫ್ ಚರ್ಚೆ ತೀವ್ರಗೊಂಡಿದ್ಯಾಕೆ? ಕೆಲವು ಅಂಶಗಳ ಮೇಲೆ ಕ್ರಮ ಕೈಗೊಳ್ಳದಂತೆ ಸುಪ್ರೀಂ ಸರ್ಕಾರವನ್ನು ಏಕೆ ಕೇಳಿದೆ?