ಬೆಂಗಳೂರು: ಜೂನ್ 24 ಮಂಗಳವಾರದಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸೇರಿದಂತೆ ಹಲವು ಬೆಂಬಲಿಗರನ್ನು ವಸತಿ ಸಚಿವ ಜಮೀರ್ ಅಹ್ಮದ್ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಆರೋಪದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಮೇಲೆ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಸರ್ಫರಾಜ್ ಖಾನ್ ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ: ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ? ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ!
ಆದ್ದರಿಂದ ರೂಪೇಶ್ ರಾಜಣ್ಣ ಅವರು ಸರ್ಫರಾಜ್ ಖಾನ್ ಆರೋಪಕ್ಕೆ ದಾಖಲೆ ಕೇಳಲು ಜಮೀರ್ ನಿವಾಸಕ್ಕೆ ಬಂದಿದ್ದ ವೇಳೆ ಹೈ ಡ್ರಾಮಾ ನಡೆದಿದೆ. ಈ ವೇಳೆ ಪೊಲೀಸರು ಹಾಗೂ ರೂಪೇಶ್ ರಾಜಣ್ಣ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಇದನ್ನೂ ನೋಡಿ: ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ | ಅಕ್ಷರಕ್ಕಾಗಿ ಸಂಭ್ರಮಿಸುವ ವಾತಾವರಣ: ಅನುಪಮಾJanashakthi Media
