ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಮಂಡ್ಯ: ಕಾಮುಕ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 10 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಘೋಷಿದ್ದಾರೆ.

ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಹಮ್ಮಿಕೊಂಡಿರುವ ಕುಂಭಮೇಳದಲ್ಲಿ ಭಾಗಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು, ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ವೇದಿಕೆಯಲ್ಲಿ ಮಳವಳ್ಳಿ ಪಟ್ಟಣದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಿದ್ದಾರೆ.

ಕಳೆದ ಮಂಗಳವಾರ ಮನೆ ಪಾಠಕ್ಕೆ ಹೋಗಿದ್ದ 10 ವರ್ಷದ ಬಾಲಕಿಯನ್ನು ಶಿಕ್ಷಕ ಕಾಂತರಾಜು ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದಾದ ನಂತರ ಕಾಮುಕ ಕಾಂತರಾಜು ಅನ್ನು ಪೊಲೀಸರು ಬಂಧಿಸಿದ್ದಾರೆ. ಹೆತ್ತವರು ತಮ್ಮ ಮಗಳನ್ನು ನೆನದು ಕಣ್ಣೀರು ಹಾಕುವುದರ ಜೊತೆಗೆ ಕಾಂತರಾಜುವನ್ನು ನೇಣು ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ತೀವ್ರವಾಗಿ ಖಂಡಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *