ಗಾಂಧಿ ಕುಟುಂಬದ ಹೊರತಾದವರು ಅಧ್ಯಕ್ಷರಾಗಲಿ: ಪ್ರಿಯಾಂಕಾ ಗಾಂಧಿ

ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ (ಬಾಸ್) ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಘಾತಕಾರಿ ಸೋಲನುಭವಿಸಿದ…

ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಪೂರ್ಣ ಪ್ರಮಾಣದ ಕಾರ್ಯಾರಂಭಕ್ಕೆ ಅನುಮತಿ: ಆಶ್ವಾಸನೆ

ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಶೋಧನಾ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಭಾಷಾ ಅಧ್ಯಯನ ಕೇಂದ್ರ ನವದೆಹಲಿ:  ಬಹುದಿನಗಳ ಬೇಡಿಕೆಯಾದ…

ಫೇಸ್‌ಬುಕ್‌’ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಕರ್ ಬರ್ಗೆಗೆ ಕಾಂಗ್ರೆಸ್‌ ಪತ್ರ

ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದ ಕಾಂಗ್ರೆಸ್ ನವದೆಹಲಿ: ಕೇಂದ್ರದ ಆಡಳಿತಾರೂಢ ಬಿಜೆಪಿ ಮತ್ತು ಫೇಸ್ ಬುಕ್ ಸಂಬಂಧದ ಕುರಿತು…

ಜನಪರ ಕಾಯ್ದೆಗಳ ತಿದ್ದುಪಡಿ: ರಾಜ್ಯವ್ಯಾಪಿ ಪ್ರತಿಭಟನೆಗೆ ಜೆಡಿಎಸ್​​ ಹೋರಾಟ

ಪಕ್ಷದ ಸಂಸದರು, ಶಾಸಕರು, ಜಿಲ್ಲಾ ಮುಖಂಡರೊಂದಿಗೆ ದೇವೇಗೌಡ ವರ್ಚುವಲ್‍ ಸಭೆ   ಬೆಂಗಳೂರು: ಕೆಲವು ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಸುಗ್ರಿವಾಜ್ಞೆ…

ಫೇಸ್‌ಬುಕ್‌ ಕುರಿತ ಮಾಧ್ಯಮ ವರದಿ ನಂತರ ಬೆದರಿಕೆ: ದೂರು

ದೆಹಲಿ ಪೊಲೀಸರಿಗೆ ಫೇಸ್‌ಬುಕ್‌ನ ಇಂಡಿಯಾದ ಉನ್ನತ ಅಧಿಕಾರಿ ಅಂಕಿ ದಾಸ್  ದೂರು ನವದೆಹಲಿ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಮುಖಂಡರ ದ್ವೇಷ…

 NEET-JEE ಪರೀಕ್ಷೆ ಮುಂದೂಡಿಕೆಗೆ ಸುಪ್ರೀಂ ನಕಾರ

ವಿದ್ಯಾರ್ಥಿಗಳ ಭವಿಷ್ಯವನ್ನು ಬಲಿಕೊಡುವುದು ಸರಿಯಲ್ಲ   ನವದೆಹಲಿ: ಕೊರೋನಾ ವೈರಸ್ ಇರುವ ಕಾರಣ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ NEET…

ದಸರಾ ಮೇಲೆ ಕೊರೊನಾ ಕರಿನೆರಳು

ಕೇಂದ್ರದ ಮಾರ್ಗಸೂಚಿ ಮೇಲೆ ನಿರ್ಧಾರ  ಅದ್ಧೂರಿ ಬದಲು ಸರಳ ಸಾಂಪ್ರದಾಯಿಕ ದಸರಾ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಅದ್ಧೂರಿಯಾಗಿ ನಡೆಯುವುದು…

ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಮಹೇಂದ್ರ ಸಿಂಗ್‍ ಧೋನಿ, ಸುರೇಶ್‍ ರೈನಾ ವಿದಾಯ

ನವದೆಹಲಿ: ಭಾರತ ಕ್ರಿಕೆಟ್‍ ತಂಡದ ಯಶಸ್ವಿ ನಾಯಕನೆಂದೇ ಖ್ಯಾತವಾಗಿರುವ ಮಹೇಂದ್ರಸಿಂಗ್‍ ಧೋನಿ  ಮತ್ತು ಎಡಗೈ ಬ್ಯಾಟ್ಸ್‍ಮನ್‍ ಸುರೇಶ್‍ ರೈನಾ  ಎಲ್ಲಾ ಬಗೆಯ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.

ಎಂ.ಎಸ್‍.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಲಿದ್ದಾರೆ ಎಂದು ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿತ್ತು. ಆದರೆ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದ ಧೋನಿ ಈಗ ವಿದಾಯ ಘೋಷಿಸಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ https://www.instagram.com/p/CD6ZQn1lGBi/ ವಿಡಿಯೊವನ್ನು ಪೋಸ್ಟ್‌ ಮಾಡಿರುವ ಧೋನಿ,

ನಿಮ್ಮ ಪ್ರೀತಿ, ಅಭಿಮಾನ ಮತ್ತು ಬೆಂಬಲಕ್ಕೆ ನನ್ನ ಧನ್ಯವಾದಗಳು. ಇಂದು (ಶನಿವಾರ) ಸಂಜೆ 7.29ಕ್ಕೆ ಕ್ಕೆ ನಾನು ನಿವೃತ್ತಿ ಹೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.ಭಾರತಕ್ಕೆ ಎರಡು ಬಾರಿ ವಿಶ್ವಕಪ್ ತಂದುಕೊಂಡ ಕೀರ್ತಿ ಧೋನಿಗೆ ಸಲ್ಲುತ್ತದೆ. ಧೋನಿ ಕೊನೆಯ ಬಾರಿ 2019 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು.

2019 ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ರಂಗದಿಂದ ದೂರವುಳಿದಿದ್ದರು. ಸುದೀರ್ಘ ವಿಶ್ರಾಂತಿಯಲ್ಲಿದ್ದ ಮಹಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪುನರಾಗಮನ ಮಾಡುತ್ತಾರ ಅಥವಾ ಇಲ್ಲವೇ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿದ್ದವು. ಅಲ್ಲದೆ ಟಿ-20 ವಿಶ್ವಕಪ್‌ನಲ್ಲೂ ಭಾಗವಹಿಸುವರೇ ಎಂಬುದು ಅನುಮಾನವೆನಿತ್ತು. ಈ ಮಧ್ಯೆ ಬಿಸಿಸಿಐ ವಾರ್ಷಿಕ ಗುತ್ತಿಗೆ ಒಪ್ಪಂದದಿಂದಲೂ ವಿಶ್ವಕಪ್ ವಿಜೇತ ಮಾಜಿ ನಾಯಕರನ್ನು ಹೊರಗಿಡಲಾಗಿತು. ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಿಕೆಟ್ ರಂಗದಿಂದ ದೂರವುಳಿದಿದ್ದ 38ರ ಹರೆಯದ ಮಹೇಂದ್ರ ಸಿಂಗ್ ಧೋನಿ ಸದ್ಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸುವ ಮೂಲಕ ಭಾರತ ತಂಡದಿಂದ ದೂರ ಸರಿದಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಎಂಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ. ’ಕ್ಯಾಪ್ಟನ್ ಕೂಲ್‘ ಎಂದೇ ಖ್ಯಾತರಾಗಿರುವ ಧೋನಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವರು. ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗವಹಿಸಲು ಅವರು ಶುಕ್ರವಾರ ಚೆನ್ನೈಗೆ ಬಂದಿಳಿದ್ದಾರೆ

ಜಾರ್ಖಂಡ್ ರಾಜಧಾನಿ ರಾಂಚಿಯ ಧೋನಿ ಹೆಚ್ಚಾಗಿ ಬ್ಯಾಟಿಂಗ್ ಮಾಡಿದ್ದು 5 ಅಥವಾ 7ನೇ ಕ್ರಮಾಂಕದಲ್ಲಿ. ಆದರೂ 350 ಏಕದಿನ ಪಂದ್ಯಗಳಿಂದ 10773 ರನ್‌ಗಳನ್ನು ಗಳಿಸಿದ್ದಾರೆ. ಅದರಲ್ಲಿ10 ಶತಕ ಮತ್ತು 73 ಅರ್ಧಶತಕಗಳು ಇವೆ.90 ಟೆಸ್ಟ್‌ಗಳಲ್ಲಿ 4876 ರನ್‌ ಗಳನ್ನು ಕಲೆಹಾಕಿದ್ದರು. ಅದರಲ್ಲಿ ಆರು ಶತಕ, ಒಂದು ದ್ವಿಶತಕ ಮತ್ತು 33 ಅರ್ಧಶತಕಗಳು ಸೇರಿವೆ.ಟಿ20 ಕ್ರಿಕೆಟ್‌ನಲ್ಲಿ 98 ಪಂದ್ಯಗಳನ್ನು ಆಡಿ 4432 ರನ್‌ಗಳನ್ನು ಗಳಿಸಿದ್ದಾರೆ. ಎರಡು ಅರ್ಧಶತಕಗಳು ಇವೆ.

ಭೂಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

  • ಮಾಜಿ ಪ್ರಧಾನಿ, ರಾಜ್ಯ ಸಭಾ ಸದಸ್ಯ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ  ಧರಣಿ

ಹಾಸನ: ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಜೆಡಿಎಸ್ ವತಿಯಿಂದ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ಬಾವುಟ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷನೆ ಕೂಗುತ್ತಾ ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಮಳೆಯ ನಡುವೆಯೂ ಧರಣಿ ನಡೆಸಿದರು.

ಜೆಡಿಎಸ್‍  ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಉಳ್ಳವರು ಕೃಷಿ ಭೂಮಿ ಖರಿದಿಗೆ ಮುಂದಾಗುತ್ತಾರೆ. ಇದರಿಂದ ಕೃಷಿ ಭೂಮಿ ಹಣವಂತರ ಕೈ ಸೇರಲಿದೆ. ರಾಜ್ಯದಲ್ಲಿ ರೈತರ ಜಮೀನು ಲೂಟಿ ಆಗಲಿದೆ. ಆದ್ದರಿಂದ ಈ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷದ ರಾಜಕಾರಣ ಮಾಡಿಕೊಂಡು ಬರಲಾಗುತ್ತಿದೆ. ವಿಧಾನ ಸಭೆ ಅಧಿವೇಶನ ಕರೆಯಲಿ. ರಾಜ್ಯ ಸರ್ಕಾರದ ಭ್ರಷ್ಟಚಾರದ ಕುರಿತು ಎಳೆಎಳೆಯಾಗಿ ಬಿಚ್ಚಿಡಲಾಗುವುದು. ಯಡಿಯೂರಪ್ಪ ಅವರಿಗೆ ಮುಖ್ಯ ಮಂತ್ರಿಯಾಗಿರುವು ಇದೇ ಕೊನೆಯ ಅವಧಿ ಆದ್ದರಿಂದ ಎಷ್ಟು ಬೇಕೋ ಅಷ್ಟು ಭ್ರಷ್ಟಾಚಾರ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ರಾಜ್ಯದಲ್ಲಿ ಉದ್ಯೋಗ ಸೃಷ್ಠಿ ಮಾಡಬೇಕು ಎಂದು ಅನೇಕ ಬಾರಿ ಕೇಳಿದ್ದೇವೆ.  ಆದರೆ ರೈತರಿಂದ ಭೂಮಿ ಕಿತ್ತುಕೊಂಡು ಯುವಕರಿಗೆ ಉದ್ಯೋಗ ನೀಡಿ ಎಂದು ನಾವು ಕೇಳಿಲ್ಲ. ಕೈಗಾರಿಕೆಗಳಿಗೆ ಶಕ್ತಿ ನೀಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎನ್ನುತ್ತಾರೆ. ಆದರೆ, ಇದರಿಂದ ಸಾಕಷ್ಟು ರೈತರಿಗೆ ಅನನುಕೂಲ ಆಗಲಿದೆ. ಹಾಸನದಲ್ಲಿ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ ಹೋರಾಟ ಆರಂಭವಾಗಿದ್ದು, ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಕರೆಕೊಟ್ಟರು.
ಶಾಸಕ ಎ.ಟಿ ರಾಮಸ್ವಾಮಿ ಮಾತನಾಡಿ, ಉಳುವವನೇ ಭೂಮಿಯ ಒಡೆಯ ಎಂಬು ಉದ್ದೇಶ ಹೊಂದಿದ್ದ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ತಿದ್ದುಪಡಿ ತರುವ ಮೂಲಕ ಉಳ್ಳವನೇ ಭೂಮಿಯ ಒಡೆಯ ಎಂದು ಅರ್ಥ ನೀಡಿದೆ. ಹಣವಂತರು ಈಗಾಗಲೇ ಕೃಷಿ ಭೂಮಿ ಖರೀದಿ ಮಾಡುವ ಪ್ರಕ್ರಿಯೇ ನಡೆಯುತ್ತಿದೆ. ಆದ್ದರಿಂದ ರೈತರ ಹಿತದೃಷ್ಠಿಯಿಂದ ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ಮನ್ನು ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಜನ ವಿರೋಧಿ ಕಾನೂನುಗಳನ್ನ ಜಾರಿ ಮಾಡಿದೆ, ಕೊರೊನಾ ಇಲ್ಲದೆ ಹೋಗಿದ್ರೆ ರಕ್ತ ಪಾತ ಆಗೋಕೆ ನಾವು ಬಿಡುತ್ತಿರಲಿಲ್ಲ. ಆದ್ರೆ ಏನ್ಮಾಡೋದು ಕೊರೊನಾದಿಂದ ನೀವು ಬಚಾವಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ-ಟೆಂಡರ್ ಅಂತೀರಾ, ಇದ್ರಿಂದ ಯಾರಿಗಾದ್ರು ಉಪಯೋಗ ಆಗಿದ್ಯಾ? ಪ್ರಧಾನಿ ಮೋದಿಯವರೇ ನೀವು ಹೇಳುತ್ತಿರೊ ಯೋಜನೆಗಳಿಂದ ಯಾರಿಗಾದ್ರು ಉಪಯೋಗ ಆಗಿದ್ಯಾ, ಸುಮ್ಮನೇ ಬೋಗಸ್ ಯೋಜನೆ ತಂದು ಜನರನ್ನ ದಿಕ್ಕೆಡಿಸುತ್ತಿದ್ದೀರಾ, ನಿಮಗೆ ಒಳ್ಳೆಯದಾಗಲ್ಲ, ಭೂ ತಾಯಿ ನಿಮ್ಮನ್ನ ಕ್ಷಮಿಸೋದಿಲ್ಲ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್.ಪಿ.ಸ್ವರೂಪ್, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಬೆಂಗಳೂರು ಗಲಭೆ ಪ್ರಕರಣ ಉನ್ನತ ತನಿಖೆಯಾಗಲಿ: ಹೆಚ್ಡಿಡಿ

ಕಾಯ್ದೆ ತಿದ್ದುಪಡಿ ವಿರುದ್ಧ ತವರಿಂದಲೇ ಹೋರಾಟ ಆರಂಭ   ಹಾಸನ: ಬೆಂಗಳೂರಿನ ಡಿಜೆಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದಿರುವ ಗಲಭೆ ಪ್ರಕರಣದ ಬಗ್ಗೆ…

ವಿಶ್ವಾಸ ಗೆದ್ದ ಅಶೋಕ್ ಗೆಹ್ಲೋಟ್ ಸರ್ಕಾರ

ಆಂತರಿಕ ಭಿನ್ನಮತದಿಂದ ಬಂಡಾಯವೆದ್ದಿದ್ದ ಸಚಿನ್ ಪೈಲಟ್ ರಾಹುಲ್, ಪ್ರಿಯಾಂಕ, ಹಿರಿಯ ಕಾಂಗ್ರೆಸ್ಸಿಗರ ಮನವೊಲಿಕೆಯಿಂದ ಮರಳಿದ್ದ ಸಚಿನ್ ಪೈಲಟ್ ವಿಶ್ವಾಸಮತ ಯಾಚನೆ ವೇಳೆ…

ವಿಪಕ್ಷಗಳ ಸಾಲಿನ ಪಕ್ಕದಲ್ಲಿ ಕುಳಿತ ಬಂಡಾಯಗಾರ ಸಚಿನ್ ಪೈಲಟ್

–      ವಿಶ್ವಾಸಮತ ಕೋರಲು ಸಜ್ಜಾಗಿರುವ ಕಾಂಗ್ರೆಸ್ ಸರ್ಕಾರ –      ತಾವು ಕಾಂಗ್ರೆಸ್‌ ಪಕ್ಷದ ಅತ್ಯಂತ ನಿಷ್ಠಾವಂತ ಕಟ್ಟಾಳು ಎಂದ ಪೈಲಟ್ ಜೈಪುರ:…

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ದೋಷಿ: ಸುಪ್ರೀಂ ಕೋರ್ಟ್

ಕಳೆದ ಆರು ವರ್ಷಗಳಲ್ಲಿ ‘ಭಾರತದ ಪ್ರಜಾಪ್ರಭುತ್ವದ ನಾಶ’ದಲ್ಲಿ ಸುಪ್ರೀಂ ಕೋರ್ಟ್ ಪಾತ್ರ ವಹಿಸಿದೆ ಎಂದು ಟ್ವೀಟ್‌ ಮಾಡಿದ್ದ ಪ್ರಶಾಂತ್ ಭೂಷಣ್  …

ಅಶೋಕ್ ಗೆಹ್ಲೋಟ್ – ಸಚಿನ್ ಪೈಲಟ್ ಭೇಟಿ

–      ಒಂದು ತಿಂಗಳ ಹಿಂದೆ ಅಶೋಕ್ ಗೆಹ್ಲೋಟ್ ವಿರುದ್ಧ  ಬಂಡಾಯವೆದ್ದಿದ್ದ ಸಚಿನ್ ಪೈಲಟ್   ಜೈಪುರ: ರಾಜಸ್ಥಾನ ರಾಜಕಾರಣದಲ್ಲಿ ಗುರುವಾರ ಕ್ಷಿಪ್ರಗತಿಯಲ್ಲಿ…

ರಾಜಸ್ಥಾನ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಬಿಜೆಪಿ ನಿರ್ಧಾರ

ಶುಕ್ರವಾರದಿಂದ ಆರಂಭವಾಗಲಿರುವ ಅಧಿವೇಶನ ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್‍ನ ಆಂತರಿಕ ಭಿನ್ನಮತ ಕೊನೆಗೊಂಡು ಆಡಳಿತ ಪುನರ್ ಸ್ಥಾಪನೆ ಆಯಿತು ಎನ್ನುವಷ್ಟರಲ್ಲಿ ಅಶೋಕ್ ಗೆಹ್ಲೋಟ್…

ಸೆಪ್ಟಂಬರ್‌ನಲ್ಲಿ ಶಾಲಾರಂಭಕ್ಕೆ ಆತುರವಿಲ್ಲ: ಸುರೇಶ್​ ಕುಮಾರ್

ಮಕ್ಕಳ ಆರೋಗ್ಯ, ಸುರಕ್ಷತೆ ಮುಖ್ಯ ಕಲಿಕೆಗೆ ಸಂಬಂಧಿಸಿದಂತೆ ವಿದ್ಯಾಗಮನ ಯೋಜನೆ ಜಾರಿ   ಮಂಡ್ಯ: ಸೆಪ್ಟಂಬರ್‌ನಿಂದ ಶಾಲೆಗಳ ಆರಂಭ ಮಾಡಲು ಆತುರವಿಲ್ಲ…

ಸರ್ಕಾರ ಉಳಿಸಿಕೊಂಡ ಜಾದೂಗಾರ ಅಶೋಕ್‌ ಗೆಹ್ಲೋಟ್‌

ಜೈಪುರ:  ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಷ್ಠೆಗೆ ಕಾರಣದಿಂದ ರಾಷ್ಟ್ರೀಯ ಮಟ್ಟದಲ್ಲಿ ಕಾರಣವಾಗಿದ್ದ ರಾಜಾಸ್ಥಾನದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಸತತ ಹೋರಾಟಗಳ ಮೂಲಕ ಮುಖ್ಯಮಂತ್ರಿ…

ಹಿರಿಯೂರು ಬಳಿ ಬಸ್‌ಗೆ ಬೆಂಕಿ: 3 ಮಕ್ಕಳು ಸೇರಿ ಐವರು ಸಜೀವ ದಹನ

29 ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರುತ್ತಿದ್ದ ಬಸ್‌ ವಿಜಯಪುರ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಬೆಂಕಿ ಹೊತ್ತಿ…

ಪೊಲೀಸ್ ನಿಯಂತ್ರಣದಲ್ಲಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ

ಪ್ರವಾದಿ ಮಹಮದ್‌ರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ನಡೆದಿದ್ದ ಪ್ರತಿಭಟನೆ ಪ್ರತಿಭಟನೆ ವೇಳೆ ಕಿಡಿಗೇಡಿಗಳಿಂದ ಗಲಭೆ ಗಲಭೆ ನಿಯಂತ್ರಿಸಲು ಪೊಲೀಸರಿಂದ ಗೋಲಿಬಾರ್‌…

ಪ್ರಣಬ್ ಮುಖರ್ಜಿ ಆರೋಗ್ಯ ಇನ್ನಷ್ಟು ಗಂಭೀರ

 – ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಮಾಜಿ ರಾಷ್ಟ್ರಪತಿ   ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಇನ್ನೂ…