ಬೆಳಗಾವಿ| ಮಾಜಿ ಶಾಸಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಆಟೋ ಚಾಲಕ

ಬೆಳಗಾವಿ: ಗೋವಾದಿಂದ ಬೆಳಗಾವಿಗೆ ಬಂದಿದ್ದ ಮಾಜಿ ಶಾಸಕರ ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಸಣ್ಣ ಅಪಘಾತವಾಗಿದ್ದರಿಂದ ಇಬ್ಬರ ನಡುವೆ ಗಲಾಟೆಯಾಗಿದ್ದು, ನಂತರ ಮಾಜಿ ಶಾಸಕರು ಮೃತಪಟ್ಟ ಘಟ‌ನೆ ಇಂದು ಶನಿವಾರ ಸಂಭವಿಸಿದೆ. ಲಾವೋ ಮಾಮಲೇದಾರ್ ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದರು.

ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ. ಘಟನೆ ಬಳಿಕ ಅವರು ಶ್ರೀನಿವಾಸ ಲಾಡ್ಜ್ ಕಡೆಗೆ ಬಂದಿದ್ದಾರೆ. ಈ ವೇಳೆ ಲಾಡ್ಜ್ ಎದುರು ಬಂದು ಮಾಜಿ ಶಾಸಕನ ಮೇಲೆ ಚಾಲಕ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದಾಗಿ ಲಾವೋ ಮಾಮಲೇದಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಿಂದುಳಿದ ವರ್ಗಗಳ ವಕೀಲರಿಗೆ ಮೀಸಲಾತಿ ನೀಡುವ ವಿಚಾರ ಗಂಭೀರ: ಸುಪ್ರೀಂ ಕೋರ್ಟ್‌

ಇನ್ನೂ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೃತ ದೇಹ ಬೆಳಗಾವಿ ಬೀಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತಕ್ಷಣವೆ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಟೋ ಚಾಲಕನಿಂದ ಹಲ್ಲೆಯಾದ ಬಳಿಕ ಮಾಜಿ ಶಾಸಕರು ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಾಜಿ ಶಾಸ ಲಾವೋ ಮಾಮಲೇದಾರ್ ಅವರ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಿರುವ ಹಿನ್ನೆಲೆ ಆಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆ ಸಂಬಂಧ ಆರೋಪಿ ಮುಜಾಯಿದ್ ಶಕಿಲ್ ಸನದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ನೋಡಿ: ಡಾ. ಬಂಜಗೆರೆಯವರ ಸಾಂಸ್ಕೃತಿಕ ಅಧ್ಯಯನದಲ್ಲಿ ಜನರ ದನಿ ಕಾಣುತ್ತದೆ – ಡಾ. ರವಿಕುಮಾರ್‌ ಬಾಗಿ Janashakthi Media

Donate Janashakthi Media

Leave a Reply

Your email address will not be published. Required fields are marked *