ಕೊಯಮತ್ತೂರು: ಕೊಯಮತ್ತೂರು ಉಕ್ಕಡಂ ಬಸ್ ನಿಲ್ದಾಣದ ಬಳಿ ಬೈಕ್ ಟ್ಯಾಕ್ಸಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಡಿಸೆಂಬರ್ 17, 2024ರಂದು ಕೊಯಮತ್ತೂರು ಜಿಲ್ಲಾ ಆಟೋ ಚಾಲಕರ ಜಂಟಿ ಸಮಿತಿ ಪ್ರತಿಭಟನೆ ನಡೆಸಿತು.
ಜಿಲ್ಲೆಯ ಎಲ್ಲಾ ಆಟೋ ಚಾಲಕರ ಸಂಘಟನೆಗಳನ್ನೊಳಗೊಂಡ ಜಂಟಿ ಸಮಿತಿ ಅಧ್ಯಕ್ಷ ಸೆಲ್ವಂ, ಸಿಐಟಿಯು ತಮಿಳುನಾಡು ಆಟೋ ವರ್ಕರ್ಸ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಎಂ. ಶಿವಾಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ 200ಕ್ಕೂ ಹೆಚ್ಚು ಆಟೋ ಕಾರ್ಮಿಕರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ICDS ಪ್ರತ್ಯೇಕ ನಿರ್ದೇಶನಾಲಯ ಮಾಡಲು ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ
ತಮಿಳುನಾಡಿನಲ್ಲಿ ವೈಯಕ್ತಿಕ ಬಳಕೆಗೆ ಖರೀದಿಸಿರುವ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬೈಕ್ ಟ್ಯಾಕ್ಸಿಯಾಗಿ ಬಳಸಬಾರದು ಎಂದು ಒತ್ತಾಯಿಸಿ ಡಿಸೆಂಬರ್ 10ರಂದು ಸಿಐಟಿಯು ಸೇರಿದಂತೆ ಆಟೊ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಇದರ ಪರಿಣಾಮ ಬೈಕ್ ಟ್ಯಾಕ್ಸಿ ನಿಷೇಧಿಸಿ ಸಾರಿಗೆ ಆಯುಕ್ತರು ಆದೇಶಿಸಿದ್ದರು. ಆದರೆ ಅಂದು ಸಂಜೆ ತಮಿಳುನಾಡು ಸಾರಿಗೆ ಸಚಿವ ಶಿವಶಂಕರ್ ಅವರು, ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸುಳ್ಳು ಮಾಹಿತಿ ನೀಡಿ, ಬೈಕ್ ಟ್ಯಾಕ್ಸಿ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಮತ್ತು ಬೈಕ್ ಟ್ಯಾಕ್ಸಿ ನಿಷೇಧಿಸಲು ಸಾಧ್ಯವಿಲ್ಲ ಎಂದರು. ಇದನ್ನು ಆಟೋ ಚಾಲಕರ ಸಂಘ ತೀವ್ರವಾಗಿ ಖಂಡಿಸಿದೆ. ಇದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು.
ಇದರ ಬೆನ್ನಲ್ಲೇ ಡಿ.19ರಂದು ಬೈಕ್ ಟ್ಯಾಕ್ಸಿ ನಿಷೇಧಿಸಬೇಕು, ಸಾರಿಗೆ ಆಯುಕ್ತರ ಆದೇಶ ಜಾರಿಗೊಳಿಸಬೇಕು, ಸಚಿವ ಶಿವಶಂಕರ್ ನೀಡಿರುವ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಆಟೋ ಚಾಲಕರ ಸಂಘವು ಡಿ.19ರಂದು ರ್ಯಾಲಿ ನಡೆಸಿ ಜಿಲ್ಲಾ ರಾಜಧಾನಿಗಳಲ್ಲಿ ಪ್ರತಿಭಟನೆ ನಡೆಸಲಿದೆ. ಕ್ರಮ ಕೈಗೊಳ್ಳದಿದ್ದರೆ ನಿರಂತರ ಪ್ರತಿಭಟನೆ ನಡೆಸಲಿದ್ದೇವೆ ಎಂದು ಚಾಲಕರು ಎಚ್ಚರಿಸಿದ್ದಾರೆ.
ಇದನ್ನೂ ನೋಡಿ : ಬೆಳಗಾವಿ | ಕಬ್ಬು ಬೆಳೆಗೆ ಸೂಕ್ತ ದರ ನಿಗದಿ ಮಾಡಿ – ಕಬ್ಬು ಬೆಳೆಗಾರರ ಧರಣಿ Janashakthi Media