ಓಲಾ, ಉಬರ್ ಆಟೋ ಪ್ರಯಾಣ ದರ ನಿಗದಿ ನ. 25ರೊಳಗೆ ನಿರ್ಧಾರ: ಹೈಕೋರ್ಟ್​ಗೆ ಸರ್ಕಾರ ಮಾಹಿತಿ

ಬೆಂಗಳೂರು: ಓಲಾ, ಉಬರ್ ಸಾರಿಗೆ ಸೇವೆಯಲ್ಲಿ ಆಟೋ ರಿಕ್ಷಾಗಳಿಗೆ ನಿರ್ಬಂಧ ವಿಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಈ ವಿವಾದವು ಹೈಕೋರ್ಟ್‌ ವಿಚಾರಣೆಯಲ್ಲಿದ್ದು, ಸರ್ಕಾರ ಮತ್ತು  ಆ್ಯಪ್ ಆಧಾರಿತ ಸಂಸ್ಥೆ ಹಾಗೂ ಚಾಲಕರ ಸಂಘದೊಂದಿಗೆ ಮಾತುಕತೆ ನಡೆದಿದೆ. ಆದರೂ ಒಮ್ಮತಕ್ಕೆ ಬರಲಾಗಿಲ್ಲ.

ಮೊಬೈಲ್ ಅ್ಯಪ್ ಆಧಾರಿತ ಓಲಾ, ಉಬರ್ ಸೇವೆಗಳಲ್ಲಿ ಆಟೋಗಳ ಬಳಕೆಗೆ ದರ ನಿಗದಿಗೆ ಕುರಿತಂತೆ ಅಹವಾಲು ಕೇಳಲಾಗಿದೆ. ನವೆಂಬರ್​​ 25ರ ಒಳಗಾಗಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಸರ್ಕಾರವು ಕರ್ನಾಟಕ ಹೈಕೋರ್ಟ್​​ ಗೆ ಮಾಹಿತಿ ನೀಡಿದೆ.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನ್ಯಾಯಪೀಠಕ್ಕೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮಾಹಿತಿಗಳನ್ನು ನೀಡಿದರು. ಅಲ್ಲದೆ, ದರ ನಿಗದಿ ವಿಚಾರದ ಕುರಿತು ಸಂಬಂಧಿಸಿದವರಿಂದ ಅಹವಾಲು ಅಹ್ವಾನಿಸಲಾಗಿದೆ. ದರ ನಿಗದಿ ಬಗ್ಗೆ ನವೆಂಬರ್‌ 25ರ ಒಳಗಾಗಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಲ್ಲಿಯವರೆಗೂ ಹೆಚ್ಚುವರಿ ಶುಲ್ಕದ ಬಗ್ಗೆ ಮಧ್ಯಂತರ ಆದೇಶ ನೀಡದಂತೆ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್​ 28ಕ್ಕೆ ಮುಂದೂಡಿದೆ.

ಮೊಬೈಲ್ ಅ್ಯಪ್ ಆಧಾರಿತ ಓಲಾ, ಉಬರ್ ಆಟೋ ಸಂಚಾರಿ ಸೇವೆಗೆ ಸಂಬಂಧಿಸಿದಂತೆ ಎದ್ದಿರುವ ಗೊಂದಲದಿಂದಾಗಿ ಆ್ಯಪ್‌ ಆಧಾರಿತ ಓಲಾ ಮತ್ತು ಉಬರ್‌ ಆಟೋ ರಿಕ್ಷಾ ಸೇವೆ ಸ್ಥಗಿತಗೊಳಿಸಬೇಕೆಂದು ಸರಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ (ಓಲಾ) ಮತ್ತು ಉಬರ್‌ ಇಂಡಿಯಾ ಟೆಕ್ನಾಲಜೀಸ್‌ ಪ್ರೈವೆಟ್‌ ಲಿಮಿಟೆಡ್‌ (ಉಬರ್‌) ಮತ್ತು ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಷನ್‌ ಸರ್ವೀಸಸ್‌ ಪ್ರೈವೇಟ್‌ ಲಿ. (ರಾಪಿಡೋ) ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟಿಗೆ ಸಲ್ಲಿಸಿದ್ದರೆ. ಅಲ್ಲದೆ, ದರ ಹೆಚ್ಚಳಕ್ಕೆ ಕೋರಿ ಓಲಾ, ಉಬರ್ ಸಂಸ್ಥೆಗಳು ಮಧ್ಯಂತರ ಅರ್ಜಿಯನ್ನು ಸಲ್ಲಿಸಿವೆ.

Donate Janashakthi Media

Leave a Reply

Your email address will not be published. Required fields are marked *