ಮೈಸೂರು | ಸಂಗೀತ ವಿವಿಯಿಂದ ಎಚ್‌. ಜನಾರ್ಧನ್ (ಜನ್ನಿ) ಸೇರಿದಂತೆ ಮೂವರಿಗೆ ಡಾಕ್ಟರೇಟ್‌

ಮೈಸೂರು: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್‌ ಸಂಗೀತ  ವಿವಿಯಿಂದ ರಂಗಕರ್ಮಿ ಎಚ್‌. ಜನಾರ್ಧನ್ (ಜನ್ನಿ) ಸೇರಿದಂತೆ ಮೂವರು ಸಾಧಕರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ. ಮೈಸೂರು

ಇದನ್ನೂ ಓದಿ : JNUSU 2025 : ಮೂರು ಸ್ಥಾನಗಳಲ್ಲಿ ಎಡ ಒಕ್ಕೂಟ ಮುನ್ನಡೆ; ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇರ ಸ್ಪರ್ಧೆ

ನಗರದ ಲಕ್ಷ್ಮೀಪುರಂನಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನ.8ರಂದು ಬೆಳಿಗ್ಗೆ 11.30ಕ್ಕೆ ನಡೆಯುವ 10ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು. ಸಂಗೀತ ಕ್ಷೇತ್ರದಿಂದ ಪ್ರೊ.ಬಿ.ಆರ್. ಶೇಷಾದ್ರಿ ಅಯ್ಯಂಗಾರ್ ಮತ್ತು ಜಾನಪದ ಸಂಗೀತ ಕ್ಷೇತ್ರದಿಂದ ಜಿ.ಎಂ. ಶಿವಪ್ರಸಾದ್ (ಗೊಲ್ಲಹಳ್ಳಿ ಶಿವಪ್ರಸಾದ್) ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರು

2024–25ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಡಿ.ಲಿಟ್ ಪದವಿ ಪ್ರದಾನ ನಡೆಯಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್‌, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪಾಲ್ಗೊಳ್ಳುವರು. ಕೇರಳದ ಕಲಾಮಂಡಲಂ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ. ಅನಂತಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮೈಸೂರು

7 ಮಂದಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಲಾಗುವುದು. ಸ್ನಾತಕೋತ್ತರ ಪದವಿ (ಎಂಪಿಎ)ಯಲ್ಲಿ ಶ್ರವ್ಯಾ ಎ. ಭರತನಾಟ್ಯ ವಿಭಾಗದಲ್ಲಿ 6 ಚಿನ್ನದ ಪದಕ ಗಳಿಸಿದ್ದಾರೆ. ಲತಾ ವಿ. (ಕರ್ನಾಟಕ ಸಂಗೀತ ಗಾಯನ ವಿಭಾಗ) 5, ಡಿ.ಎನ್. ಇಂದ್ರಕುಮಾರ್ (ಹಿಂದೂಸ್ತಾನಿ ಸಂಗೀತ ಗಾಯನ ವಿಭಾಗ) 3, ಶ್ರೀಕಾಂತ್ ಎಸ್. ಹಾಗೂ ಸಿ.ನಂಜುಂಡಸ್ವಾಮಿ (ನಾಟಕ ವಿಭಾಗ) ತಲಾ ಒಂದು ಚಿನ್ನದ ಪದಕ ಪಡೆದಿದ್ದಾರೆ.

ಸ್ನಾತಕ ಪದವಿಯಲ್ಲಿ (ಬಿಪಿಎ) ಪಿ. ಪುನೀತಾ (ಕರ್ನಾಟಕ ಸಂಗೀತ ಗಾಯನ ವಿಭಾಗ) 4, ಸಂಜಯ್‌ ಎಂ. (ಹಿಂದೂಸ್ತಾನಿ ಸಂಗೀತ ಗಾಯನ ವಿಭಾಗ) 2 ಹಾಗೂ ಸುಜನಾ ಎಂ.ಬಿ. (ಭರತನಾಟ್ಯ ವಿಭಾಗ) ಒಂದು ಚಿನ್ನದ ಪದಕ ಗಳಿಸಿದ್ದಾರೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಇದನ್ನೂ ನೋಡಿ : ಕರ್ನಾಟಕ ರಾಜ್ಯೋತ್ಸವ | ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

Donate Janashakthi Media

Leave a Reply

Your email address will not be published. Required fields are marked *