ಹೊಸದಿಲ್ಲಿ: ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಆಯುಷ್ಮಾನ್ ಆರೋಗ್ಯ ಮತ್ತು ಮಂದಿರಗಳು ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಆಯುಷ್ಮಾನ್
ಮರುನಾಮಕರಣ ಪ್ರಕ್ರಿಯೆಯನ್ನು ಜಾರಿಗೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು ಈ ವರ್ಷದ ಡಿಸೆಂಬರ್ 31ರೊಳಗೆ ಹೊಸ ನಾಮಕರಣದೊಂದಿಗೆ ಪ್ರಾಥಮಿಕ ಆರೋಗ್ಯ ಸೌಲಭ್ಯಗಳ ಪೋಟೋಗಳನ್ನು ಕೇಳಿದೆ.
ಇದನ್ನೂ ಓದಿ: 2024 ಜನರವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ
ಆಯುಷ್ಮಾನ್ ಭಾರತ್–ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಪೋರ್ಟಲ್ನಲ್ಲಿ ಮರುನಾಮಕರಣ ಮಾಡಲಾದ ಪ್ರಾಥಮಿಕ ಆರೋಗ್ಯ ಸೌಲಭ್ಯಗಳ ಛಾಯಾಚಿತ್ರಗಳನ್ನು ಅಪ್ಲೋಡ್ ಮಾಡಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮರುನಾಮಕರಣ ಮಾಡಲಾದ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳು ‘ಆರೋಗ್ಯಂ ಪರ್ಮಂ ಧನಮ್‘ ಎಂಬ ಅಡಿಬರಹವನ್ನು ಹೊಂದಿರಬೇಕು ಎಂದು ಹೆಚ್ಚುವರಿ ಆರೋಗ್ಯ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕ ಎಲ್.ಎಸ್. ಚಾಂಗ್ಸನ್ ನಿರ್ದೇಶಿಸಿದ್ದಾರೆ.
ವಿಡಿಯೋ ನೋಡಿ: ಮಹಾಧರಣಿ| ಬಹಿರಂಗ ಸಭೆ ಜನವಿರೋಧಿ ಮತ್ತು ಕಾರ್ಪೋರೇಟ್ ನೀತಿಗಳ ವಿರುದ್ದ ದುಡಿಯುವ ಜನರ ಮಹಾಧರಣಿ