ಅಜೀರ್ ಶರೀಫ್ ದರ್ಗಾ ಸ್ಥಳವನ್ನು ಶಿವದೇವಾಲಯ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ರಾಜಸ್ಥಾನ ನ್ಯಾಯಾಲಯ ಒಪ್ಪಿಗೆ

ಜೈಪುರ : ಅಜೀರ್ ಶರೀಫ್ ದರ್ಗಾ ಅಥವಾ ಸೂಫಿ ಸಂತ ಸ್ವಾಜಾ ಮೊಯಿನುದ್ದೀನ್ ಚಿಸ್ತಿ ಸಮಾಧಿ ಸ್ಥಳವನ್ನು ಶಿವದೇವಾಲಯ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಬುಧವಾರ ರಾಜಸ್ಥಾನ ನ್ಯಾಯಾಲಯ ಒಪ್ಪಿಕೊಂಡಿದೆ.

ಉತ್ತರಪ್ರದೇಶದ ಸಂಭಾಲ್‌ನಲ್ಲಿ ಶಾಹಿ ಜಮಾ ಮಸೀದಿಯ ಸಮೀಕ್ಷೆ ನಡೆಸಲು ನ್ಯಾಯಾಲಯ ಆದೇಶ ನೀಡಿದ ಬಳಿಕ ನಡೆದ ಪ್ರತಿಭಟನೆ ಹಾಗೂ ಪೊಲೀಸ್ ಗೋಲಿಬಾರ್‌ನಲ್ಲಿ ಅಪ್ರಾಪ್ತ ಸೇರಿದಂತೆ ಐವರು ಸಾವನ್ನಪ್ಪಿದ ದಿನಗಳ ನಂತರ ಈ ಬೆಳವಣಿಗೆನಡೆದಿದೆ.

ಇದನ್ನೂ ಓದಿ : ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾಜಗೊಳಿಸಿದ ದೆಹಲಿ ಹೈಕೋರ್ಟ್‌

ಹಿಂದೂ ಸೇನಾದ ರಾಷ್ಟ್ರಾಧ್ಯಕ್ಷ ವಿಷ್ಣು ಗುಪ್ತಾ ಸಲ್ಲಿಸಿದ ಅರ್ಜಿಯನ್ನು ಅಜೀರ್ ಪಶ್ಚಿಮ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮನಮೋಹನ್ ಚಂಡೇಲ್ ವಿಚಾರಣೆ ನಡೆಸಲು ಒಪ್ಪಿಕೊಂಡರು ಹಾಗೂ ದರ್ಗಾ ಸಮಿತಿ, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ, ಭಾರತದ ಪುರಾತತ್ವ ಸರ್ವೇಕ್ಷಣಾಲಯಕ್ಕೆ ಸಮನ್ಸ್ ನೋಟಿಸ್ ಜಾರಿಗೊಳಿಸುವಂತೆ ನಿರ್ದೇಶಿಸಿದರು. ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ನಿಗದಿಗೊಳಿಸಿತು.

ಅಜೀರ್ ದರ್ಗಾವನ್ನು ಶಿವ ದೇವಾಲಯವೆಂದು ಘೋಷಿಸುವಂತೆ ಕೋರಿ ಹಿಂದೂ ಸೇನಾ ಸಲ್ಲಿಸಿದ ಅರ್ಜಿಯನ್ನು ಪುರಷ್ಕರಿಸಲು ಅಜೀರ್ ನ್ಯಾಯಾಲಯ ಈ ವರ್ಷ ಸೆಪ್ಟೆಂಬರ್‌ನಲ್ಲಿ ನಿರಾಕರಿಸಿದ ತಿಂಗಳ ಬಳಿಕ ಈ ಬೆಳವಣಿಗೆ ನಡೆದಿದೆ. ತನ್ನ ನಿರ್ಧಾರಕ್ಕೆ ಈ ಪ್ರಕರಣದ ವಿಚಾರಣೆ ನಡೆಸಲು ತನಗೆ ಅಧಿಕಾರ ವ್ಯಾಪ್ತಿ ಇಲ್ಲದಿರುವುದು ಕಾರಣ ಎಂದು ಅದು ಉಲ್ಲೇಖಿಸಿತ್ತು. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮಂದೂಡಿತ್ತು.

ಇದನ್ನೂ ನೋಡಿ : ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕಂತೆ ಪೇಜಾವರರೇ “ನಮ್ಮನ್ನು ಅಂದ್ರೆ ನಿಮ್ಮನ್ನಾ” ಮಾತ್ರನಾ? – ಕೆ.ಎಸ್.‌ ವಿಮಲಾ

Donate Janashakthi Media

Leave a Reply

Your email address will not be published. Required fields are marked *