NEP ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ: ಬಿ.ಕೆ.ಹರಿಪ್ರಸಾದ್

Please follow and like us:
  • ಆರ್ ಎಸ್‌ ಎಸ್ ಅಣತಿಯಂತೆ ಸರ್ಕಾರ ನಡೆದುಕೊಳ್ಳುತ್ತಿದೆ,
  • ಸರ್ಕಾರ ಹಿಡನ್ ಅಜೆಂಡಾ ಜಾರಿಗೆ ತರ್ತಿದೆ ಬಿ ಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು:- ಎನ್‍ಇಪಿ ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾಡಿನ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು, ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ. ದಾರ್ಶನಿಕರು, ಹೋರಾಟಗಾರರ ಪಠ್ಯ ಕೈಬಿಟ್ಟಿದ್ದಾರೆ. ಸಾಣೆಹಳ್ಳಿ ಶ್ರೀಗಳು, ಆದಿ ಚುಂಚನಗಿರಿ ಶ್ರೀಗಳು ವಿರೋಧ ವ್ಯಕ್ಯಪಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು, ಬಸವಣ್ಣನವರ ಪಾಠ ಕೈಬಿಟ್ಟಿದ್ದು ಸರಿಯಲ್ಲ. ಕೂಡಲೇ ಪಾಠಗಳಲ್ಲಿ ಸೇರಿಸುವಂತೆ ಒತ್ತಾಯಿಸಿದ್ದಾರೆ. ಆರ್‌ಎಸ್‍ಎಸ್ ಅಣತಿಯಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ನಾಗಪುರ, ಹಾವಿನಪುರದ ಒತ್ತಡಕ್ಕೆ ಸರ್ಕಾರ ಮಣಿದಿದೆ. ಸರ್ಕಾರ ಹಿಡನ್ ಅಜೆಂಡಾ ಜಾರಿಗೆ ತರ್ತಿದೆ. ಇದಕ್ಕೆ ನಮ್ಮದು ತೀವ್ರ ವಿರೋಧವಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Please follow and like us:
Donate Janashakthi Media

Leave a Reply

Your email address will not be published. Required fields are marked *