ಗುರುಗ್ರಾಮ: ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಹರ್ಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಖೇರ್ಕಿ ದೌಲಾ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಗುರುಗ್ರಾಮ ಪುರಸಭೆಯ ಸಿಬ್ಬಂದಿಯೋರ್ವರು ಅಂಬೇಡ್ಕರ್ ಪ್ರತಿಮೆಯ ತಲೆ ದೇಹದಿಂದ ಬೇರ್ಪಟ್ಟಿರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಆ ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ನಾವು ವಿಧ್ವಂಸಕ ಕೃತ್ಯ ಎಸಗಿದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಖೇರ್ಕಿ ದೌಲಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸತ್ಯೇಂದರ್ ಸಿಂಗ್ ಹೇಳಿದ್ದಾರೆ.
ಭೀಮ್ ಸೇನಾ ನಾಯಕ ಸತ್ಪಾಲ್ ತನ್ವರ್ ಈ ಕುರಿತು ಪ್ರತಿಕ್ರಿಯಿಸಿ, ಪ್ರತಿಮೆಯನ್ನು ಧ್ವಂಸಗೊಳಿಸಿದ ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
ಇದನ್ನೂ ನೋಡಿ: ಸುಳ್ಳು ಪ್ರಕರಣವನ್ನು ದಾಖಲಿಸುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ #bdayananda |Commissioner of Police,