ಬೆಂಗಳೂರು: ನಗರದ 1 ನೇ ತ್ವರಿತಗತಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರು
ಯಡಿಯೂರಪ್ಪ ಜೊತೆ ಸಹ-ಆರೋಪಿಗಳಾದ ವೈ.ಎಂ. ಅರುಣಾ, ರುದ್ರೇಶ ಮತ್ತು ಮರುಳಸಿದ್ಧಯ್ಯ ಜಿ. ಮರಿಸ್ವಾಮಿ ಗೆ ಸಹ ಸಮನ್ಸ್ ಜಾರಿ ಮಾಡಿ ಮಾರ್ಚ್ 15ರಂದು ವಿಚಾರಣೆ ನಿಗದಿಪಡಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಇತ್ತೀಚೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಬಿ.ಎಸ್. ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ನೀಡಿದ ಹೈಕೋರ್ಟ್, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚಿಸಿತ್ತು. ವಿಚಾರಣೆಗೆ ಮೊದಲು ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು.
ಇದನ್ನೂ ಓದಿ: ತೆಲಂಗಾಣ| ಕಾಲುವೆ ಸುರಂಗದಲ್ಲಿ ಸಿಲುಕಿದ್ದ 8 ಕಾರ್ಮಿಕರೂ ಸಾವು
ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.
ಏನಿದು ಪ್ರಕರಣ
ಬಿ ಎಸ್ ಯಡಿಯೂರಪ್ಪ ರ ಬಳಿ ಸಹಾಯ ಕೋರಿ ತಾಯಿ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗಳು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸಕ್ಕೆ ಬಂದಿದ್ದಾದ ಬಾಲಕಿಯನ್ನು ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ ಬನ್ನಿ | ಮಾರ್ಚ್ 02 ರಿಂದ ಪ್ರತಿ ರವಿವಾರ ಬೆಳಗ್ಗೆ 9 ಗಂಟೆಗೆ