ಬೆಂಗಳೂರು: ಚಿಕ್ಕಮಗಳೂರಿನಲ್ಲಿರುವ ಬಾಬಾಬುಡನ್‌ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಸರಕಾರದ ಆದೇಶ ಪ್ರಶ್ನಿಸಿ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು ಸರಕಾರದ ಆದೇಶ ರದ್ದುಗೊಳಿಸಿದೆ. ಸರ್ಕಾರಿ ಆದೇಶ ಪ್ರಶ್ನಿಸಿ 2018ರ ಏಪ್ರಿಲ್‌ನಲ್ಲಿ ಹೈಕೋರ್ಟ್‌ಗೆ ತಕರಾರು ಮನವಿ ಸಲ್ಲಿಸಿತ್ತು.
ಇದನ್ನು ಓದಿ: ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ಸರಕಾರಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಿದ ಹೈಕೋರ್ಟ್
ಅರ್ಜಿ ವಿಚಾರವಣೆಯನ್ನು ಸುದೀರ್ಘ ವಾದ ಆಲಿಸಿದ ಹೈಕೋರ್ಟ್ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿತ್ತು. ಅರ್ಜಿ ಪೂರ್ಣಗೊಳಿಸಿದ ನ್ಯಾಯಾಲಯವು ಸರ್ಕಾರಿ ಆದೇಶವನ್ನು ರದ್ದುಪಡಿಸಿದೆ.
ಪ್ರಕರಣವನ್ನು ಹೊಸದಾಗಿ ಪರಿಗಣಿಸಿಬೇಕು ಹಾಗೂ ಕಾನೂನಿನ ಪ್ರಕಾರ ಸೂಕ್ತ ರೀತಿಯಲ್ಲಿ ನಿರ್ಧರಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತೇನೆ. ಅಲ್ಲದೆ, ಉನ್ನತ ಮಟ್ಟದ ಸಮಿತಿಯ ವರದಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಲಾಗಿಲ್ಲ ಎಂದು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠವು ತೀರ್ಪು ನೀಡಿದೆ.
ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ ದಾಸ್ ನೇತೃತ್ವದ ಉನ್ನತಮಟ್ಟದ ಸಮಿತಿ ನೀಡಿರುವ ವರದಿ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ರಾಜ್ಯ ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಅರ್ಜಿದಾರರ ಪರ ವಕೀಲ ಜಗದೀಶ್ ಬಾಳಿಗಾ ಎನ್ ವಾದಿಸಿದ್ದರು.