ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2026ನೇ ಸಾಲಿನ ‘ಬಾಬು ಜಗಜೀವನ್ ರಾಮ್’ ರಾಜ್ಯ ಪ್ರಶಸ್ತಿಗೆ ಐವರು ಭಾಜನರಾಗಿದ್ದಾರೆ. ಈ ಪುರಸ್ಕಾರಕ್ಕೆ ಸಾಮಾಜಿಕ ಕಾರ್ಯಕರ್ತೆ ಚಂದ್ರಮ್ಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರು ಆಯ್ಕೆಯಾಗಿದ್ದಾರೆ.
ರಾಯಚೂರು ಜಿಲ್ಲೆ ಅತಿಕೂರದ (ಅತ್ತಿನೂರು) ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಳಗಾವಿಯ ಪತ್ರಕರ್ತ ಸರಜೂ ಕಾಟ್ಕರ್, ಮೈಸೂರಿನ ಮಾಜಿ ಮೇಯರ್ ನಾರಾಯಣ, ತುಮಕೂರಿನ ನಗರಸಭೆ ಮಾಜಿ ಸದಸ್ಯ ನರಸೀಯಪ್ಪ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಮಾಜ ಕಲ್ಯಾಣ ಇಲಾಖೆ ರಚಿಸಿದ್ದ ಉನ್ನತಮಟ್ಟದ ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ ಅರ್ಹರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಸಮಾಜಮುಖಿ ಕೆಲಸಗಳ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆಯಾದವರು ತಮ್ಮ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವುದರಿಂದ ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಟೂಲ್ ಕಿಟ್ ಮೂಲಕ ವಿರೋಧ ಪಕ್ಷದ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ರಿಪೋರ್ಟ್! ಪ್ರಿಯಾಂಕ್ ಗಂಭೀರ ಆರೋಪ
ರಾಜ್ಯ ಮಟ್ಟದ ಈ ಪ್ರಶಸ್ತಿ ಮೂಲಕ ಸಮಾಜದಲ್ಲಿ ಸಮಾನತೆ, ನ್ಯಾಯ ಹಾಗೂ ಸಾಮಾಜಿಕ ಪ್ರಗತಿಗೆ ಕೆಲಸ ಮಾಡುತ್ತಿರುವ ವ್ಯಕ್ತಿಗಳ ಸೇವೆಯನ್ನು ಸರ್ಕಾರ ಗುರುತಿಸುವುದು ಪ್ರಮುಖ ಉದ್ದೇಶವಾಗಿದೆ
ಪ್ರಶಸ್ತಿಯು ತಲಾ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನವಾದ ಏ.5ರಂದು ಬೆಂಗಳೂರಿನ ವಿಧಾನಸೌಧ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗುವ ವಿಶೇಷ ಕಾರ್ಯಕ್ರಮದಲ್ಲಿ ಐವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಯುಕ್ತ ರಾಕೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ನೋಡಿ : ಕರ್ನಾಟಕದ ಮತದಾರರ ಪಟ್ಟಿ ಪರಿಶೀಲನೆ – ಮ್ಯಾಪಿಂಗ್ ಆಗದ ಮತದಾರರು ಎಷ್ಟು? Janashakthi Media
