ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ – ಸಿದ್ದರಾಮಯ್ಯ

ಬೆಂಗಳೂರು: ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ ರಾಮ್ ರವರ 37 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರ ಬಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ, ದೇಶದ ಮೊದಲ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು, ದಕ್ಷ ಆಡಳಿತಗಾರರು.

ಇದನ್ನೂ ಓದಿ:ವಸತಿ ಶಾಲೆಗಳ ಮಕ್ಕಳ ಕಲಿಕೆಗೆ ಹೆಚ್ಚಿನ ಆದ್ಯತೆ -ಸಚಿವ ಹೆಚ್.ಸಿ ಮಹದೇವಪ್ಪ

ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾಲಂಬಲನೆಯಾಗಲು ಕಾರಣಕರ್ತರು ಎಂದರು. ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು. ಅಂಥ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

Donate Janashakthi Media

Leave a Reply

Your email address will not be published. Required fields are marked *