ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ಬಿಜೆಪಿ  ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಬಿಜೆಪಿ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು 2023ರ ಆಗಸ್ಟ್‌ ತಿಂಗಳಲ್ಲಿಯೇ ಘೋಷಿಸಿ, ಆ ಬಳಿಕ ರಾಜಕೀಯದಿಂದ ಅಂತರ ಕಾಪಾಡಿಕೊಂಡಿದ್ದ ಸಂಸದ ಬಿ.ಎನ್.‌ ಬಚ್ಚೇಗೌಡ ಈಗ ಅಧಿಕೃತವಾಗಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಿದ್ದಿದ್ದವು.

ಇದನ್ನೂ ಓದಿಲೋಕಸಭೆ | 5 ವರ್ಷಗಳಲ್ಲಿ ಒಂದೇ ಒಂದು ಶಬ್ಧ ಮಾತಾಡದ ರಾಜ್ಯದ ನಾಲ್ವರು ಬಿಜೆಪಿ ಸಂಸದರು

ರಾಜೀನಾಮೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಚ್ಚೇಗೌಡ, 2008ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿ, ಶಾಸಕನಾಗಿ, ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆʼʼ ಎಂದು ಹೇಳಿದ್ದಾರೆ. ಆದರೆ, ಬಿ ಎನ್.ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ, ಕಾಂಗ್ರೆಸ್‌ ಶಾಸಕನಾಗಿರುವುದರಿಂದ ಟಿಕೆಟ್‌ ತಪ್ಪಿದೆ. ಹೀಗಾಗಿ ಬಿ.ಎನ್.ಬಚ್ಚೇಗೌಡ, ಕಾಂಗ್ರೆಸ್‌ ಪಕ್ಷಕ್ಕೆ ಸೇರಿ ಲೋಕಸಭಾ ಚುನಾವಣೆಯಲ್ಲಿ ಕೈಗೆ ಬೆಂಬಲ ನೀಡುವ ಸಾಧ್ಯತೆ ಬಹುತೇಕವಾಗಿದೆ.

81ರ ವಯೋಮಾನದ ಬಿ.ಎನ್‌. ಬಚ್ಚೇಗೌಡ ಅವರು ಜನತಾ ಪರಿವಾರದ ಮೂಲಕ ರಾಜಕೀಯ ಪ್ರವೇಶಿಸಿದ್ದರು. 1978, 1985, 1994, 1999 ಮತ್ತು 2008ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಐದು ಬಾರಿ ಆಯ್ಕೆಯಾಗಿದ್ದಾರೆ. 1989, 2004 ಮತ್ತು 2013ರ ಚುನಾವಣೆಯಲ್ಲಿ ಸೋಲು ಕಂಡ ಅವರು ಒಮ್ಮೆ ಜಗದೀಶ್‌ ಶೆಟ್ಟರ್‌ ಅವರ ಸಂಪುಟದಲ್ಲಿ ಮಂತ್ರಿಯೂ ಆಗಿದ್ದರು. 2014ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರ ವಿರುದ್ಧ ಸೋತಿದ್ದ ಅವರು ಮುಂದೆ 2019ರಲ್ಲಿ ಗೆಲುವು ಸಾಧಿಸಿದ್ದರು.

 

Donate Janashakthi Media

Leave a Reply

Your email address will not be published. Required fields are marked *