ಹಿಂದುಳಿದ ಸಮುದಾಯದವರು ಮೋದಿಯ ಸುಳ್ಳುಗಳಿಂದ ಎಚ್ಚರದಿಂದಿರಬೇಕು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದ ಹಿಂದುಳಿದ ಸಮುದಾಯಗಳು ಮೋದಿ ಹೇಳುತ್ತಿರುವ ಸುಳ್ಳುಗಳಿಂದ ಎಚ್ಚರದಿಂದರಬೇಕು.. ರಾಜಕಾರಣಕ್ಕಾಗಿ ಹಿಂದುಳಿದ ಸಮುದಾಯಗಳ ಹಾದಿ ತಪ್ಪಿಸಿ ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಹಿರಂಗ ವೇದಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಘರ್ಜಿಸಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಈ ರೀತಿಯಾಗಿ ಪ್ರಶ್ನಿಸಿದರು.

ದೇಶದಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದ ಬಳಿಕ ಬಿಜೆಪಿ ಸೋಲುತ್ತದೆ ಎನ್ನುವ ಸುಳಿವು ಮೋದಿಯವರಿಗೆ ಸ್ಪಷ್ಟವಾಗಿ ಸಿಕ್ಕಿದೆ. ಈ ಕಾರಣಕ್ಕೆ ಭಯಾನಕ ಸುಳ್ಳು ಹೇಳ್ಕೊಂಡು ತಿರುಗುತ್ತಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎನ್ನುವ ಸುಳ್ಳನ್ನು ಹೇಳುವ ಮೂಲಕ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಎಚ್ಚರ ವಹಿಸಿ ಎಂದು ಹಿಂದುಳಿದ ಜಾತಿ-ಸಮುದಾಯಗಳಿಗೆ ಎಚ್ಚರಿಸಿದರು.

ಇದನ್ನು ಓದಿ : 3454 ಕೋಟಿ ರೂ. ಬರ ಪರಿಹಾರ: ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ

ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು ಹೇಳ್ತಿದಾರೆ. ಇವರಿಗೆ ಸಂವಿಧಾನದ ತಿಳಿವಳಿಕೆ ಇಲ್ಲ. ಈ ಮಟ್ಟದ ಸುಳ್ಳು ಹೇಳುವ ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನಾದರೂ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ಇದೇ ಬಿಜೆಪಿ. ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟಿಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ಅದನ್ನು ವಿರೋಧಿಸಿ ಪ್ರತಿಭಟಿಸಿದ್ದು ಇದೇ ಬಿಜೆಪಿ. ಹಿಂದುಳಿದವರ, ಮಹಿಳೆಯರ ವಿರೋಧಿಯಾಗಿರುವ ಇವರು ಈಗ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟಿ ಏಕ ಕಾಲದಲ್ಲಿ ಎರಡೂ ಸಮುದಾಯಗಳ ಜೀವಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ನೋಡಿ : ಮೋದಿಯವರ ‘ಮುಸ್ಲಿಂ, ಮೊಘಲ್, ಮಟನ್’ ಎನ್ನುವ ಅಪಾಯಕಾರಿ ಸಿದ್ಧಾಂತ. Janashakthi Media

Donate Janashakthi Media

Leave a Reply

Your email address will not be published. Required fields are marked *