ವ್ಯಾಪಕ ಪ್ರತಿಭಟನೆ, ಕಲ್ಲು ತೂರಾಟ; ಸಹಜ ಸ್ಥಿತಿಗೆ ಬದ್ಲಾಪುರ್ ರೈಲು ನಿಲ್ದಾಣ

ಬದ್ಲಾಪುರ್: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ್ ನಲ್ಲಿ ತೀವ್ರ ಪ್ರತಿಭಟನೆ ನಡೆಸಿ ರೈಲು ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ರೈಲು ಸಂಚಾರ ತಡೆದು ಕಲ್ಲು ತೂರಾಟಕ್ಕೆ ಕಾರಣವಾಗಿದ್ದ ಖಾಸಗಿ ಶಾಲೆಯ ನರ್ಸರಿ ತರಗತಿಯ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದ ಮರುದಿನವಾದ ಇಂದು ಬುಧವಾರ ಪರಿಸ್ಥಿತಿ ಸಹಜತೆಗೆ ಮರಳುತ್ತಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸಪ್ರೆಸ್‌ ಸುದ್ದಿ ಮಾಡಿದೆ.

ಯಾವುದೇ ಅಹಿತಕರ ಘಟನೆ ಪುನರಾವರ್ತನೆ ಸಾಧ್ಯತೆಯಿರುವುದರಿಂದ ನಿನ್ನೆ ದುರ್ಘಟನೆ ನಡೆದ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಇಂದು ತೀವ್ರ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಶಾಲೆಯೊಂದರಲ್ಲಿ ಇಬ್ಬರು ಪುಟ್ಟ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಡೆದ ತೀವ್ರ ‘ರೈಲ್ ರೋಕೋ’ ಪ್ರತಿಭಟನೆಯ ಒಂದು ದಿನದ ನಂತರ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಪರಿಸ್ಥಿತಿ ಇಂದು ಸಹಜ ಸ್ಥಿತಿಗೆ ಮರಳಿದೆ.

ಖಾಸಗಿ ಶಾಲೆಯ ನರ್ಸರಿ ತರಗತಿಯ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇಂದು ಬುಧವಾರ ಹೆಚ್ಚಿನ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಿ ಶಾಲಾ ಕಟ್ಟಡವನ್ನು ಧ್ವಂಸಗೊಳಿಸಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಮತ್ತು ರೈಲು ಸಂಚಾರಕ್ಕೆ ಹಳಿಗಳನ್ನು ತೆರವುಗೊಳಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.

 

 

Donate Janashakthi Media

Leave a Reply

Your email address will not be published. Required fields are marked *