ಯುಎಪಿಎ ಪ್ರಕರಣ: 7 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನವದೆಹಲಿ: 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಬಂಧಿತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಏಳು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್‌ 2ರಂದು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಯುಎಪಿಎ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಕಪ್ಪು , ಅಧಿಕ ತೂಕ ಎಂದು ಜೀವಂತವಾಗಿ ಸುಟ್ಟು ಕೊಂದ ವ್ಯಕ್ತಿಗೆ ಮರಣದಂಡನೆ

ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮುಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ನೋಡಿ: ಧರ್ಮಸ್ಥಳದ ನಿಗೂಢಗಳು | ಚಿಕ್ಕ ಕೆಂಪಮ್ಮ ನೀಡಿದ ದೂರಿಗೂ ಸೌಜನ್ಯ ಪ್ರಕರಣಕ್ಕೂ ಲಿಂಕ್‌ !!Janashakthi Media

Donate Janashakthi Media

Leave a Reply

Your email address will not be published. Required fields are marked *