ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರೇಣುಕಾಸ್ವಾಮಿ
ಗುರುವಾರ ಕೇಸ್‌ನ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರಿದ್ದ ಪೀಠವು ಈ ಆದೇಶವನ್ನು ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ 2024 ಡಿಸೆಂಬರ್‌ನಲ್ಲಿ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಬೆಂಗಳೂರು ಪೊಲೀಸ್ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇತ್ತೀಚೆಗೆ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಹೈಕೋರ್ಟ್ ಜಾಮೀನು ನೀಡಿದ ನಡೆಯನ್ನು ತರಾಟೆಗೆ ತೆಗೆದುಕೊಂಡಿತ್ತು. ಎಲ್ಲಾ ಪ್ರಕರಣದಲ್ಲಿಯೂ ಇದೇ ರೀತಿ ಕೊಲೆ ಅಪರಾಧಿಗೆ ಜಾಮೀನು ನೀಡಲಾಗುತ್ತಾ ಎಂದು ಹೈಕೋರ್ಟ್‌ನ ಪ್ರಶ್ನೆ ಮಾಡಿತ್ತು.
ಸುಪ್ರೀಂ ಕೋರ್ಟ್ ಹೇಳಿದ್ದೇನು?
- ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಪಡಿಸಲಾಗಿದೆ. ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಹಿಂಪಡೆಯಲಾಗಿದೆ.
- ಜಾಮೀನು ಮಂಜೂರು ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು.
- ಆರೋಪಿ ಎಷ್ಟೇ ದೊಡ್ಡವರಾಗಿರಲಿ, ಅವರು ಕಾನೂನಿಗಿಂತ ದೊಡ್ಡವರಲ್ಲ. ಯಾರೂ ಕಾನೂನಿಗಿಂತ ಮೇಲಿಲ್ಲ, ಯಾರೂ ಕಾನೂನಿಗಿಂತ ಕೆಳಗಿಲ್ಲ. ನಾವು ಕಾನೂನನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ಆಡಳಿತವನ್ನು ಕಾಪಾಡುವುದು ಇಂದಿನ ಅಗತ್ಯವಾಗಿದೆ.
ಇದನ್ನೂ ಓದಿ : ‘ಪ್ರೀತಿಯ ಫಿಡೆಲ್: ಹೋರಾಟಗಳ ಸ್ಫೂರ್ತಿ ಫಿಡೆಲ್ ಕ್ಯಾಸ್ಟ್ರೋ
ಯಾರ ಜಾಮೀನುಗಳು ರದ್ದು?
- ದರ್ಶನ್ ತೂಗುದೀಪ
- ಪವಿತ್ರಾ ಗೌಡ
- ಆರ್ ನಾಗರಾಜು
- ಎಂ ಲಕ್ಷ್ಮಣ್
- ಅನು ಕುಮಾರ್ ಅಲಿಯಾಸ್ ಅನು
- ಜಗದೀಶ್ ಅಲಿಯಾಸ್ ಜಗ್ಗ
- ಪ್ರದೋಷ್ ರಾವ್
ಪ್ರಕರಣದ ಹಿನ್ನೆಲೆ :
2024 ಜೂನ್ 8ರಂದು ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧನ ಮಾಡಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಿಗೆ ಡಿಸೆಂಬರ್ ವೇಳೆಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು.
ಇದನ್ನೂ ನೋಡಿ : ಪುಷ್ಪಗಳಲ್ಲಿ ಅರಳಿದ ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ’Janashakthi Media
