ಜಿಬಿಎ ಚುನಾವಣೆ: ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ ಬಳಕೆ – ಚುನಾವಣಾ ಆಯೋಗ

ಬೆಂಗಳೂರು: ಬಹುನಿರೀಕ್ಷಿತ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಮೇ 25ರ ನಂತರ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಜನವರಿ 19ರಂದು ಘೋಷಿಸಿದ್ದಾರೆ.

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಚುನಾವಣಾ ಸಿದ್ಧತೆಗಳ ಕುರಿತು ಸಮಗ್ರ ಮಾಹಿತಿ ನೀಡಿದ್ದೂ, ಈ ಬಾರಿ ಇವಿಎಂ ಬದಲಿಗೆ ಮತಪತ್ರಗಳನ್ನು ಅಂದರೆ ಬ್ಯಾಲೆಟ್‌ ಪೇಪರ್‌ಗಳನ್ನು ಬಳಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ನಿರ್ಧಾರ ಹೊಸ ಚರ್ಚೆಗೆ ಕಾರಣವಾಗಿದೆ. ಜಿಬಿಎ

ಇದನ್ನೂ ಓದಿ: ಧಾರವಾಡ | ಹೊಸ ತಲೆಮಾರಿನರು ಕ್ರಿಯಾಶೀಲರಾಗಿದ್ದಾರೆ – ಪ್ರೊ.ಪುರಷೋತ್ತಮ ಬಿಳಿಮಲೆ

ಐದು ಮಹಾನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರಿದ್ದಾರೆ ಎಂದು ವಿಶೇಷ ಆಯುಕ್ತ ಆರ್. ರಾಮಚಂದ್ರನ್ ತಿಳಿಸಿದ್ದಾರೆ.

2025ರ ಅಕ್ಟೋಬರ್ 1ರ ಆಧಾರದ ಮೇಲೆ ಬೆಂಗಳೂರು ಮಧ್ಯ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದಾದ್ಯಂತ 369 ವಾರ್ಡ್‌ಗಳಿವೆ. 45,69,193 ಪುರುಷರು, 43,20,583 ಮಹಿಳೆಯರು ಮತ್ತು 1,635 ಇತರರನ್ನು ಒಳಗೊಂಡಿದೆ. SIR ಕುರಿತಂತೆ ಬಿಎಲ್‌ಒ ಪರಿಶೀಲನೆ 2026ರ ಜನವರಿ 20 ರಿಂದ ಫೆಬ್ರವರಿ 3ರವರೆಗೆ ನಡೆಯಲಿದೆ.

ಇದನ್ನೂ ನೋಡಿ: ಉತ್ತರ ಪ್ರದೇಶ | ಮತದಾರರ “ಪರಿಷ್ಕರಣೆಯೋ? ಹರಣವೋ? | ಗುರುರಾಜ ದೇಸಾಯಿ| Janashakthi Media #upsir

Donate Janashakthi Media

Leave a Reply

Your email address will not be published. Required fields are marked *