ನವದೆಹಲಿ: ಕೇರಳದಲ್ಲಿ ಮದುವೆ ಆರತಕ್ಷತೆಗಳಲ್ಲಿ ಪರಿಸರ ಕಾಳಜಿಯನ್ನು ಉಲ್ಲೇಖಿಸಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸಬಾರದು ಎಂದು ಕೇರಳ ಹೈಕೋರ್ಟ್ ಹೇಳಿದೆ.
ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟು ಮಾಡುತ್ತಿದ್ದೂ, ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ನ್ಯಾಯಾಲಯ ಹೇಳಿದೆ.
ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ. ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧವನ್ನು ಪ್ರಾಯೋಗಿಕವಾಗಿ ಹೇಗೆ ಜಾರಿಗೆ ತರಬಹುದು ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಇದನ್ನೂ ಓದಿ: ಕೊಪ್ಪಳ| ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ; ಆರೋಪಿಗಳ ಬಂಧನ
ಘನತ್ಯಾಜ್ಯ ನಿರ್ವಹಣಾ ನಿಯಮಗಳು 2016ಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನ್ಯಾಯಾಲಯವು ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸುತ್ತಿತ್ತು.
ಗುಡ್ಡಗಾಡು ಪ್ರದೇಶಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಪ್ರಸ್ತಾಪವು ಪರಿಗಣನೆಯಲ್ಲಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. 100 ಕ್ಕಿಂತ ಹೆಚ್ಚು ಜನರಿರುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಸಲು ಪರವಾನಗಿ ಅಗತ್ಯವಿದೆ ಎಂದು ಅದು ಹೇಳಿದೆ. ಸ್ಥಳೀಯ ಸ್ವಯಮಾಡಳಿತ ಸಂಸ್ಥೆಗಳು ಈ ಪರವಾನಗಿಗಳನ್ನು ನೀಡುವ ಅಧಿಕಾರವನ್ನು ಹೊಂದಿವೆ.
ಮದುವೆ ಆರತಕ್ಷತೆಗಳಲ್ಲಿ ಅರ್ಧ ಲೀಟರ್ ನೀರಿನ ಬಾಟಲಿಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಸ್ಥಳೀಯ ಸ್ವಯಮಾಡಳಿತ ಇಲಾಖೆಯ ವಿಶೇಷ ಕಾರ್ಯದರ್ಶಿ ತಿಳಿಸಿದ್ದಾರೆ.
ಇದನ್ನೂ ನೋಡಿ: ಬಜೆಟ್ 2025 ಚರ್ಚೆ| ಶ್ರಮಜೀವಿಗಳ ಜೀವ ತೆಗೆದ ಜನದ್ರೋಹಿ ಬಜೆಟ್Janashakthi Media