ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸೋಮವಾರ ರಾತ್ರಿಯೂ ಮುಂದುವರೆದಿದ್ದು, ಉದ್ಯಾನನಗರಿ ಅಕ್ಷರಶಃ ನಲುಗಿ ಹೋಗಿದ್ದು, ಬಹುತೇಕ ಪ್ರದೇಶಗಳು ಜಲಾವೃತವಾಗಿವೆ.
ಮನೆಗಳು, ಐಟಿ-ಬಿಟಿ ಕಂಪನಿಗಳು, ಶಾಪಿಂಗ್ ಮಾಲ್ಗಳು, ಅಪಾರ್ಟ್ವೆುಂಟ್ಗಳು ಸೇರಿ 300 ಕಡೆ ಮಳೆ ನೀರು ನುಗ್ಗಿದೆ. ರಸ್ತೆಗಳಲ್ಲಿ 4 ಅಡಿವರೆಗೆ ನೀರು ಹರಿಯುತ್ತಿದೆ. ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಜಲಪ್ರಳಯದಲ್ಲಿ ಸಿಕ್ಕಿಕೊಂಡಿದ್ದ ಜನರನ್ನು ಬೋಟ್ಗಳಲ್ಲಿ ಕರೆತರುವ ಪರಿಸ್ಥಿತಿ ನಿರ್ವಣವಾಗಿದೆ.
ಅವೈಜ್ಞಾನಿಕ ರಾಜ ಕಾಲುವೆ ನಿರ್ಮಾಣದಿಂದ ಪ್ರಮುಖ ರಸ್ತೆಗಳು ಕೆರೆಗಳಂತಾಗಿವೆ. ಬಡಾವಣೆಗಳಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, ಜನ ಹೊರಬರಲು ಹರಸಾಹಸ ಪಡುವಂತಾಗಿದೆ. ಬಿಬಿಎಂಪಿಯನ್ನು ಶಪಿಸುತ್ತಲೇ ಜನತೆ ನಿಟ್ಟುಸಿರು ಬಿಡುತ್ತಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ಮಳೆ ಅವಾಂತರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸಹ ನೀರು ನಿಂತಿದ್ದು, ವಿದೇಶಿ ಪ್ರಯಾಣಿಕರು ಅಪಹಾಸ್ಯ ಮಾಡುವಂತಾಗಿದೆ.
ತೇಲಿದ ಜೋಪಡಿಗಳು : ತುತ್ತು ಅನ್ನ ಅರಸಿ ಬೆಂಗಳೂರಿಗೆ ಬಂದಿರುವ ವಲಸೆ ಕಾರ್ಮಿಕರ ಬದುಕು ರಾಜಕಾಲುವೆ ನೀರಿನಲ್ಲಿ ಕೊಚ್ಚಿಹೋಗಿದೆ. ಹೊರ ವಲಯದಲ್ಲಿ ಅಲ್ಲಲ್ಲಿ ಬೀಡು ಬಿಟ್ಟಿರುವ ಕಾರ್ಮಿಕರ ಜೋಪಡಿಗಳು ನೀರಿನಲ್ಲಿ ತೇಲುತ್ತಿದ್ದರೆ, ಅವರ ಬದುಕು ಸಂಪೂರ್ಣ ಮುಳುಗಿಹೋಗಿದೆ.
ಬಿಬಿಎಂಪಿಯಲ್ಲಿ ಕಸ ನಿರ್ವಹಣೆ ಕೆಲಸ ಮಾಡುವ ವಲಸೆ ಕಾರ್ಮಿಕರು ನಗರದ ಸುತ್ತ ಅಲ್ಲಲ್ಲಿ ಜೋಪಡಿಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಪ್ರಮುಖವಾಗಿ ತೂಬರಹಳ್ಳಿ, ಮುನ್ನೇಕೊಳಲು ಬಳಿ ರಾಜಕಾಲುವೆ ಪಕ್ಕದಲ್ಲೇ ಎರಡು ಸಾವಿರಕ್ಕೂ ಹೆಚ್ಚು ಕುಟುಂಬಗಳು ಜೋಪಡಿಗಳಲ್ಲಿ ವಾಸ ಇವೆ. ರಾಜಕಾಲುವೆಗೆ ಸ್ವಲ್ಪ ದೂರದಲ್ಲಿರುವ ಜೋಪಡಿಗಳಲ್ಲಿ ಸೋಮವಾರ ಮೊಣಕಾಲೆತ್ತರದ ನೀರಿದ್ದರೆ, ಕಾಲುವೆ ಪಕ್ಕದಲ್ಲೇ ಇರುವ ಜೋಪಡಿಗಳಲ್ಲಿ ಎದೆಮಟ್ಟಕ್ಕೆ ನೀರು ತುಂಬಿಕೊಂಡಿದೆ. ಜೀವ ಉಳಿಸಿಕೊಳ್ಳಲು ಮಕ್ಕಳೊಂದಿಗೆ ಕಾರ್ಮಿಕರು ರಸ್ತೆಗೆ ಬಂದು ನಿಲ್ಲಬೇಕಾಯಿತು.
ರಾಜಧಾನಿಯಲ್ಲಿ ಮಳೆ ಅವಾಂತರಗಳ ಘಟನೆಗಳು
ಬೆಳ್ಳಂದೂರು ಬಳಿ ರಸ್ತೆ ಜಲಾವೃತಗೊಂಡಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತ. 2 ಕಿ.ಮೀ ರಸ್ತೆ ದಾಟಲು ನಾಲ್ಕೈದು ತಾಸು ಬೇಕಾಗುತ್ತಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಟರ್ವಿುನಲ್, ವಿಐಪಿ ಲೇನ್, ಪಿಕಪ್ ಪಾಯಿಂಟ್ಗಳು ಜಲಾವೃತ. ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ನೀರು. ಟ್ರಾಯಕ್ಟರ್ಗಳ ಮೂಲಕ ಸಂಚರಿಸುವ ಅನಿವಾರ್ಯತೆ.
ವಿಧಾನಸೌಧ ಬೇಸ್ವೆುಂಟ್ನ ಕ್ಯಾಂಟೀನ್ಗೂ ನುಗ್ಗಿದ ನೀರು.
ಅನೇಕ ಅಪಾರ್ಟ್ವೆುಂಟ್ಗಳು, ಶಾಪಿಂಗ್ ಕಾಂಪ್ಲೆಕ್ಸ್ಗಳ ತಳಮಹಡಿಯ ರ್ಪಾಂಗ್ ಪ್ರದೇಶಕ್ಕೆ ನೀರು ನುಗ್ಗಿ ತೇಲಾಡಿದ ವಾಹನಗಳು.
ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ರಸ್ತೆ ಗುಂಡಿಗಳು ನಿರ್ವಣವಾಗಿದ್ದು, ವಾಹನ ಸಂಚಾರಕ್ಕೆ ಸಂಚಕಾರ ಬಂದಿದೆ.
ಬೆಂಗಳೂರಿನ ಸದ್ಯದ ಪರಿಸ್ಥಿತಿಯ ಕೆಲ ಫೋಟೋಗಳು ಇಲ್ಲಿವೆ.