ಮುಖ್ಯಮಂತ್ರಿ ರಾಜೀನಾಮೆ, ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಿದ ಕಾಂಗ್ರೆಸ್

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಮಾಡಾಳ್‌ ಪ್ರಶಾಂತ್‌ ಖಂಡಿಸಿ ಕಾಂಗ್ರೆಸ್‌ ಪಕ್ಷವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು, ವಿರೂಪಾಕ್ಷಪ್ಪ ಬಂಧನವಾಗಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದಿದ್ದು, ಇದರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಹಮ್ಮಿಕೊಂಡಿತು.

ಇದನ್ನು ಓದಿ: ₹40 ಲಕ್ಷ ಲಂಚ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ

ಇಂದು(ಮಾರ್ಚ್‌ 04) ಬೆಂಗಳೂರಿನಲ್ಲಿ ರಸ್ತೆಗಿಳಿದು ಪ್ರತಿಭಟನೆ ಮಾಡಿದ ಕಾಂಗ್ರೆಸ್‌ ಪಕ್ಷದವರು, ಪಕ್ಷದ ಕಛೇರಿಯಿಂದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ನಿವಾಸದ ಕಡೆ ಪ್ರತಿಭಟನೆ ಸಾಗಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲಿನ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಪ್ರಕರಣ  ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ತಮ್ಮ ಸರ್ಕಾರ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿಗಳು ಸುಳ್ಳು ಹೇಳುತ್ತಿದ್ದಾರೆ. ಹಾಗಾದರೆ ಏನಾಗುತ್ತಿದೆ… ನಾವು ಎಂದಿಗೂ ಭಯೋತ್ಪಾದನೆಯನ್ನು ಬೆಂಬಲಿಸಿಲ್ಲ. ಕಾಂಗ್ರೆಸ್ ಏಕೆ ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಅಮಿತ್ ಶಾ ಪ್ರಶ್ನಿಸುತ್ತಾರೆ. ಅಮಿತ್ ಶಾ ಕೂಡ ಮಹಾನ್‌ ಸುಳ್ಳುಗಾರ. ಈ ಬಗ್ಗೆ ಇಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನು ಓದಿ: ಲಂಚ ಸ್ವೀಕಾರ ಪ್ರಕರಣ : ಪ್ರಶಾಂತ್‌ ಮಾಡಾಳ್‌ ಸೇರಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮಾತನಾಡಿ, ಕರ್ನಾಟಕದಲ್ಲಿ ಬೊಮ್ಮಾಯಿ ಸರ್ಕಾರದ ಹೆಸರನ್ನು ಭ್ರಷ್ಟ ಬೊಮ್ಮಾಯಿ ಸರ್ಕಾರ ಎಂದು ಬದಲಾಯಿಸಬೇಕು. ಭಾರತದಲ್ಲಿ ಬಸವರಾಜ ಬೊಮ್ಮಾಯಿ ಎಲ್ಲಿಗೇ ಹೋದರೂ ಕರ್ನಾಟಕದ 40 ಪರ್ಸೆಂಟ್ ಸರ್ಕಾರದ ಸಿಎಂಗೆ ಸ್ವಾಗತ ಎಂಬ ಬರಮಾಡಿಕೊಳ್ಳುತ್ತಾರೆ. ನೀವೂ ಹಾಗೂ ನಿಮ್ಮ ಸರ್ಕಾರ ನಡೆಸುತ್ತಿರುವ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಯ ಸಾಬೂನಿನ ಸುವಾಸನೆಯಲ್ಲೂ ಭ್ರಷ್ಷಾಚಾರದ ಸುಗಂಧ ಪಸರಿಸುತ್ತದೆ. 20 ರೂಪಾಯಿ ಸಾಬೂನಿನಲ್ಲೇ ಇಷ್ಟೊಂದು ಭ್ರಷ್ಟಾಚಾರ ನಡೆಸುತ್ತಿರುವ ನಿಮ್ಮ ಸರ್ಕಾರವು ಇಡೀ ರಾಜ್ಯದಲ್ಲಿ ಎಷ್ಟು ಭ್ರಷ್ಷಾಚಾರ ನಡೆಸಿರಬಹುದು ಎಂದು ಪ್ರಶ್ನಿಸಿದರು.

ರಾಜ್ಯದ ಜನರ ಹಣವನ್ನೂ ಲೂಟಿ ಮಾಡುತ್ತಿದ್ದಾರೆ. ಕಮಿಷನ್ ನೀಡಲಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಿಷನ್​ ಬಗ್ಗೆ ಪ್ರಧಾನಿ ಮೋದಿಗೆ ಕೆಂಪಣ್ಣ ದೂರು ನೀಡಿದ್ದಾರೆ. ಆದರೆ ಪ್ರಧಾನಿಗಳಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದರು.

ಪ್ರತಿಭಟನೆ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ವಿರುದ್ಧ ಬಿಜೆಪಿಯ ರೋಲ್ ಕಾಲ್ “ಮಾಡೆಲ್” ವಿರೂಪಾಕ್ಷಪ್ಪ ಎಂಬ ಪೋಸ್ಟರ್ ಅಂಟಿಸಿದರು.

ಪ್ರತಿಭಟನೆ ವೇಳೆ ವಿವಿಧ ಮಾದರಿಯ ಭಿತ್ತಿಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್​​ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದರು.

ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಪೇಎಂಎಲ್‌ಎ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕ್ಷೇತ್ರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಪೇ ಎಂಎಲ್‌ಎ ಅಭಿಯಾನ ಆರಂಭಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *